Monday, December 23, 2024

ಇಂದು ಭಾರತ-ದಕ್ಷಿಣ ಆಫ್ರಿಕಾ ಮುಖಾಮುಖಿ

ದಕ್ಷಿಣ ಆಫ್ರಿಕಾ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಸೋಲು ಕಂಡ ಭಾರತ ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ.

ಇಂದು ರಾಂಚಿಯ JSCA ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಎರಡನೇ ಪಂದ್ಯ ಆಯೋಜಿಸಲಾಗಿದೆ. ಮೊದಲ ಏಕದಿನದಲ್ಲಿ ಗೆಲುವಿನ ಅಂಚಿಗೆ ಬಂದು ಸೋಲುಂಡಿದ್ದ ಭಾರತ ಇದೀಗ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಧವನ್ ಪಡೆಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ. ಹೆಚ್ಚು ಯುವ ಆಟಗಾರರಿಂದಲೇ ಕೂಡಿರುವ ಟೀಮ್ ಇಂಡಿಯಾಕ್ಕೆ ಇದೊಂದು ಅಗ್ನಿಪರೀಕ್ಷೆಯಾಗಿದೆ. ದೀಪಕ್ ಚಹರ್ ಕಾಲು ಉಳುಕಿ ಗಾಯಗೊಂಡ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ.

ಇದು ಭಾರತಕ್ಕೆ ದೊಡ್ಡ ಹಿನ್ನಡೆ. ಇವರ ಬದಲು ವಾಷಿಂಗ್ಟನ್ ಸುಂದರ್ ತಂಡ ಸೇರಿಕೊಂಡಿದ್ದಾರೆ. ಶಿಖರ್ ಧವನ್ , ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್ ಸೇರಿದಂತೆ ಭಾರತದ ತಂಡದಲ್ಲಿ ಆಡಲಿದ್ದಾರೆ. ದಕ್ಷಿಣ ಆಫ್ರಿಕಾ ತಂಡದಲ್ಲಿ ತೆಂಬಾ ಬವುಮಾ, ಕೇಶವ್ ಮಹಾರಾಜ್ ಮುಂತಾದವರು ಆಡುತ್ತಿದ್ದಾರೆ.

RELATED ARTICLES

Related Articles

TRENDING ARTICLES