Wednesday, January 22, 2025

ಯಶಸ್ವಿನಿ ಆರೋಗ್ಯ ಯೋಜನೆ ಮತ್ತೆ ಮುಂದುವರೆಸಿದ ರಾಜ್ಯ ಸರ್ಕಾರ.!

ಬೆಂಗಳೂರು: ಕಾಂಗ್ರೆಸ್​ ಸರ್ಕಾರ ಜಾರಿಗೆ ತಂದಿದ್ದ ಯಶಸ್ವಿನಿ ಆರೋಗ್ಯ ಯೋಜನೆಯನ್ನು ರಾಜ್ಯ ಸರ್ಕಾರ ಮರು ಜಾರಿಗೊಳಿಸಿ ಆದೇಶ ಹೊರಡಿಸಿದೆ.

ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಅಧಿಕೃತವಾಗಿ ಆದೇಶ ಹೊರಡಿಸಿ ಯಶಸ್ವಿನಿ ಆರೋಗ್ಯವನ್ನ ಮತ್ತೆ ಮುಂದುವರೆಸಲಾಗುವುದ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಸರ್ಕಾರದಲ್ಲಿ ಈ ಯೋಜನೆಯನ್ನ ಘೋಷಣೆ ಮಾಡಲಾಗಿತ್ತು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಾಗಿನಿಂದ ಅಂದರೆ 2018 ರಲ್ಲಿ ಈ ಯೋಜನೆ ರದ್ದುಗೊಳಿಸಲಾಗಿತ್ತು. ಈಗ ರೈತರಿಂದ ಮತ್ತು ಸಹಕಾರಿಗಳಿಂದ ಈ ಯೋಜನೆಯನ್ನ ಮುಂದುವರೆಸಿ ಎಂದು ಬೇಡಿಕೆ ಹೆಚ್ಚು ಬಂದ ಹಿನ್ನೆಲೆಯಲ್ಲಿ ಮರು ರಾಜ್ಯ ಸರ್ಕಾರ ಜಾರಿಗೊಳಿಸಿದೆ.

ಈ ಯೋಜನೆಗೆ ಬಿಜೆಪಿ ಸರ್ಕಾರ 22-23 ನೇ ಆಯವ್ಯಯದಲ್ಲಿ 300 ಕೋಟಿ ಘೋಷಣೆ ಮಾಡಿತ್ತು. ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸೆ ವೆಚ್ಚ 5 ಲಕ್ಷ ನಿಗದಿ ಮಾಡಲಾಗಿದೆ. ನಾಲ್ಕು ಸದಸ್ಯರ ಕುಟುಂಬಕ್ಕೆ ವರ್ಷಕ್ಕೆ 500 ವಂತಿಕೆ ಕಟ್ಟಬೇಕಾಗಿದೆ.ಈ ಯೋಜನೆ ಫಲಾನುಭವಿಳು ನವೆಂಬರ್​ 1 ರಿಂದ ಪ್ರಾರಂಭವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

RELATED ARTICLES

Related Articles

TRENDING ARTICLES