Friday, November 22, 2024

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯ ಇಲ್ಲ : ಕೆ.ಎಸ್. ಈಶ್ವರಪ್ಪ

ವಿಜಯಪುರ : ಹೈಕೋರ್ಟ್ ತೀರ್ಪು ನೀಡಿದಾಗಲೇ ಮುಸ್ಲಿಂ ಮುಖಂಡರು ಆ ಆರು ಹೆಣ್ಣು ಮಕ್ಕಳಿಗೆ ಬೈದು ಬುದ್ದಿ ಹೇಳಿದ್ದರೆ ಇಂದು ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ವಿಜಯಪುರದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನ ಪೀಠದ ತೀರ್ಮಾನಕ್ಕೆ ಬದ್ಧ. ಹಿಜಾಬ್ ಪ್ರಕರಣ ಇಡೀ ಪ್ರಪಂಚವೇ ಗಮನಿಸುತ್ತಿದೆ. ಇಡೀ ದೇಶದ ಜನ ಒಂದು ರೀತಿಯಲ್ಲಿ ಯಾವುದು ಸರಿ ಯಾವುದು ತಪ್ಪು ಎನ್ನುವ ಚರ್ಚೆಯಲ್ಲಿ ತೊಡಗಿದ್ದಾರೆ. ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯ ಇಲ್ಲ, ಕುರಾನ್ ನಲ್ಲೂ ಇಲ್ಲ. ಹೀಗಾಗಿ ಹೈಕೋರ್ಟ್ ತೀರ್ಪು ನೀಡಿದಾಗಲೇ ಮುಸ್ಲಿಂ ಮುಖಂಡರು ಆ ಆರು ಹೆಣ್ಣು ಮಕ್ಕಳಿಗೆ ಬೈದು ಬುದ್ದಿ ಹೇಳಿದ್ದರೆ ಇಂದು ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದರು.

ಸದ್ಯ ದ್ವಿಸದಸ್ಯ ಪೀಠ ವಿಭಿನ್ನ ಅಭಿಪ್ರಾಯ ನೀಡಿದ್ದು ಅದನ್ನು ಪ್ರಶ್ನೆ ಮಾಡುವ ಹಕ್ಕು ಯಾರಿಗೂ ಇಲ್ಲ. ಸಮಾನತೆಗೆ, ಸಂವಿಧಾನಕ್ಕೆ ಆದ್ಯತೆ ಕೊಡಬೇಕು. ಐದು ಅಥವಾ ಏಳು ಜನರ ನ್ಯಾಯಾಧೀಶರ ತೀರ್ಪು ಏನಾಗಲಿದೆ ಎಂಬುದು ನೋಡಬೇಕು. ಆರು ಜನ ಹೆಣ್ಣು ಮಕ್ಕಳನ್ನು ಎಬ್ಬಿಸಿದ ರಾಷ್ಟ್ರ ದ್ರೋಹಿಗಳು ಯಾರು..? ಮುಸ್ಲಿಂ ದಂಗೆಗೆ ಕಾರಣ ಯಾರು..? ಎಂಬ ಚರ್ಚೆ ಶುರುವಾಗಿ ಹಿಂದು ಮಕ್ಕಳು ಸಹ ಹೋರಾಟಕ್ಕೆ ಮುಂದಾದರು. ಆಗಲೇ ಮಕ್ಕಳಿಗೆ ಬುದ್ದಿ ಹೇಳಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ. ಬೆಂಕಿ ಹಚ್ಚುವ ಕೆಲಸ ಆಗಿದ್ದರಿಂದ ಪರಿಸ್ಥಿತಿ ಇಲ್ಲಿಗೆ ಬಂದಿದೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES