Monday, May 20, 2024

ನಾಳೆಯಿಂದ ರಾಜ್ಯದಲ್ಲಿ 5 ದಿನ ಮಳೆ; ಯಾವ ಜಿಲ್ಲೆಯಲ್ಲಿ ಎಷ್ಟು ಮಳೆ.?

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ 3 ದಿನ ಜೋರು ಮಳೆ ಆಗಲಿದ್ದು, ಹೀಗಾಗಿ ನಾಳೆ ಬೆಂಗಳೂರಿಗೆ ಯೆಲ್ಲೋ ಅಲರ್ಟ್​​ನ್ನ ಹವಮಾನ ಇಲಾಖೆ ಘೋಷಣೆ ಮಾಡಲಾಗಿದೆ.

ಇಂದಿನಿಂದ ರಾಜ್ಯದ ಕರಾವಳಿ ಭಾಗವಾದ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದಲ್ಲಿ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದ್ದು, ಅದರಂತೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ನಾಳೆ ಹಳದಿ ಅಲರ್ಟ್ ನೀಡಿದೆ.

ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ರಾಮನಗರ, ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಹಾವೇರಿ, ವಿಜಯನಗರ, ಬಳ್ಳಾರಿ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆವಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

RELATED ARTICLES

Related Articles

TRENDING ARTICLES