Monday, December 23, 2024

ಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್, ಕಾಂಗ್ರೆಸ್​ ಅಂದ್ರೆ ಭ್ರಷ್ಟಾಚಾರವಾಗಿದೆ; ಯಡಿಯೂರಪ್ಪ

ಬಳ್ಳಾರಿ: ಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್, ಕಾಂಗ್ರೆಸ್​ ಅಂದ್ರೆ ಭ್ರಷ್ಟಾಚಾರ. ಕಾಂಗ್ರೆಸ್ ಸರ್ಕಾರ ವೇಳೆ ಕೋಟಿ ಕೋಟಿ ಹಗರಣ ಮಾಡಿದೆ ಎಂದು ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಅವರು ಹೇಳಿದ್ದಾರೆ.

ಜಿಲ್ಲೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮೂರು ತಲೆಮಾರುಗಳಷ್ಟು ಆಸ್ತಿ ಮಾಡಿದೆ ಅಂತಾ ರಮೇಶ್ ಕುಮಾರ್ ಹೇಳಿದ್ದಾರೆ. ಕಳೆದ 5O ವರ್ಷಗಳಲ್ಲಿ ಕಾಂಗ್ರೆಸ್ ಹಗಲು ದರೋಡೆ ಮಾಡಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಕಾಂಗ್ರೆಸ್ ಅವಮಾನ ಮಾಡಿತು. ಸೋನಿಯಾಗಾಂಧಿ ಬಳ್ಳಾರಿಯಿಂದ ಗೆದ್ದು ರಾಜ್ಯಕ್ಕೆ ದ್ರೋಹ ಮಾಡಿದರು ಎಂದು ಮಾತಿನೂದ್ದಕ್ಕೂ ವಾಗ್ದಾಳಿ ನಡೆಸಿದರು.

ಈಗ ಯಾವ ಮುಖ ಇಟ್ಟುಕೊಂಡು ಭಾರತ್​ ಜೋಡೋ ಮೂಲಕ ರಾಹುಲ್ ಗಾಂಧಿ ಬಳ್ಳಾರಿಗೆ ಬರುತ್ತಿದ್ದಾರೆ.  ಈಗಾಗಲೇ ನಾವು ಎಸ್ ಸಿ, ಎಸ್ ಟಿ ಮೀಸಲಾತಿ ನೀಡಿದ್ದೇವೆ. ಇದನ್ನ ಮನೆ- ಮನೆಗೆ ಹೋಗಿ ಹೇಳಬೇಕು. ಮೀಸಲಾತಿ ಹೆಚ್ಚಳ ಮಾಡಿ ಬಿಜೆಪಿ ಐತಿಹಾಸಿಕ ನಿರ್ಣಯ ಮಾಡಿದೆ. ನಾನು ಸಿಎಂ ಇದ್ದಾಗ ಸಾಕಷ್ಟು ಜನಪ್ರಿಯ ಯೋಜನೆ ಜಾರಿಗೆ ತಂದಿದ್ದೇನೆ. ಬಿಜೆಪಿ ಸರ್ಕಾರ ನೀರಾವರಿಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದರು.

ಇನ್ನು ರಾಜ್ಯದಲ್ಲಿ 150 ಸ್ಥಾನಗಳೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರೋದು ನಿಶ್ಚಿತವಾಗಿದೆ. ಕಾಂಗ್ರೆಸ್ ನಲ್ಲಿ ಸಿಎಂ ಆಗುವ ಹಗಲುಕನಸು ಕಾಣುತ್ತಿದ್ದಾರೆ. ಅವರ ಕನಸು ನನಸಾಗುವುದಿಲ್ಲ ಎಂದು ಯಡಿಯೂರಪ್ಪ ಅವರು ಹೇಳಿದರು.

RELATED ARTICLES

Related Articles

TRENDING ARTICLES