Monday, December 23, 2024

18 ಶಾಸಕರು ಸೇರಿದಂತೆ 25 ಪ್ರಭಾವಿಗಳನ್ನು ಹನಿಟ್ರ್ಯಾಪ್​ ಬಲೆಗೆ ಕೆಡವಿದ ಖತರ್ನಾಕ್​​ ಲೇಡಿ

ಭುನೇಶ್ವರ್​ : ಬೆದರಿಕೆ ಒಡ್ಡಿ ಅನೇಕ ಹೈ ಪ್ರೊಫೈಲ್​ ಜನರ ಬಳಿ ಹಣ ಸುಲಿಗೆ ಆರೋಪದ ಮೇಲೆ ಅರ್ಚನಾ ನಾಗ್​ ಎಂಬಾಕೆಯನ್ನು ಒಡಿಶಾ ಪೊಲೀಸರು ಬಂಧಿಸಿದ್ದಾರೆ.

ಇನ್ನು, ಆರೋಪಿ ಅರ್ಚನಾ ನಾಗ್​ 18 ಶಾಸಕರು ಸೇರಿದಂತೆ 25 ಪ್ರಭಾವಿಗಳನ್ನು ತನ್ನ ಹನಿಟ್ರ್ಯಾಪ್​ ಬಲೆಗೆ ಕೆಡವಿರುವುದು ಬೆಳಕಿಗೆ ಬಂದಿದೆ. ಅರ್ಚನಾ ಮತ್ತು ಆಕೆಯ ಪತಿ ಜಗಬಂಧು ಅನೇಕ ರಾಜಕಾರಣಿಗಳು ಮತ್ತು ಪ್ರಭಾವಿ ವ್ಯಕ್ತಿಗಳೊಂದಿಗೆ ಇರುವ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗಿದೆ.

ಅದಲ್ಲದೇ, ಕೆಲವು ರಾಜಕಾರಣಿಗಳು ಅರ್ಚನಾ ಪರಿಚಯವನ್ನು ಒಪ್ಪಿಕೊಂಡರೆ ಇನ್ನು ಕೆಲವರು ಆಕೆಯೊಂದಿಗಿನ ಸಂಬಂಧವನ್ನು ನಿರಾಕರಿಸಿದ್ದಾರೆ. ಹಾಗೆನೇ ಪೊಲೀಸರು ಸಹ ತನಿಖೆ ನಡೆಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

RELATED ARTICLES

Related Articles

TRENDING ARTICLES