ಬೆಂಗಳೂರು: ಉದ್ಘಾಟನೆಗೊಂಡ ಬಳಿಕ ಸದಾ ಸುದ್ದಿಯಲ್ಲಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಇದೇ ಮೊದಲ ಬಾರಿಗೆ ದಕ್ಷಿಣ ಭಾರತದಲ್ಲಿ ಓಡಾಟವನ್ನು ನವೆಂಬರ್ 10 ರಿಂದ ಆರಂಭಿಸಲಾಗುವುದು ಎಂದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
5ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ನವೆಂಬರ್ 10 ರಿಂದ ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗದಲ್ಲಿ ಕಾರ್ಯಾಚರಣೆ ಆರಂಭಿಸಲಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಎಕ್ಸಿಕ್ಯೂಟಿವ್ ಕ್ಲಾಸ್ ಮತ್ತು ಚೇರ್ ಕಾರ್ ಕೋಚ್‌ಗಳನ್ನು ಒಳಗೊಂಡಿದೆ. ಕೇವಲ 52 ಸೆಕೆಂಡುಗಳಲ್ಲಿ ಈ ರೈಲು ಗಂಟೆಗೆ 100 ಕಿಮೀ ವೇಗದಲ್ಲಿ ಸಂಚರಿಸಲಿದೆ.
ಕಳೆದ ವರ್ಷ ಆಗಸ್ಟ್ 15 ರಂದು ಕೆಂಪು ಕೋಟೆಯ ಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮೋದಿ ಮತನಾಡಿ, ಸ್ವಾತಂತ್ರ್ಯದ ಅಮೃತ ಮಹೋತ್ಸವದ 75 ವಾರಗಳ ಅವಧಿಯಲ್ಲಿ, 75 ವಂದೇ ಭಾರತ್ ರೈಲುಗಳು ದೇಶದ ಮೂಲೆ ಮೂಲೆಗಳನ್ನು ಸಂಪರ್ಕಿಸುತ್ತವೆ ಎಂದು ಪ್ರಧಾನಿ ಮೋದಿ ಘೋಷಿಸಿದ್ದರು.