ಗೋವಾ: ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಗೋವಾದ ದೂಧ್‌ಸಾಗರ್ ಜಲಪಾತದ ಕೇಬಲ್ ಸೇತುವೆ ಕುಸಿದಿದ್ದು, 40 ಕ್ಕೂ ಹೆಚ್ಚು ಪ್ರವಾಸಿಗರನ್ನು ರಕ್ಷಿಸಲಾಗಿದೆ.
ಶುಕ್ರವಾರ(ನಿನ್ನೆ) ಸಂಜೆ ಗೋವಾ-ಕರ್ನಾಟಕ ಗಡಿಯಲ್ಲಿ ಏಕಾಏಕಿ ಸುರಿದ ಭಾರೀ ಮಳೆಯಿಂದಾಗಿ ಜಲಪಾತದಲ್ಲಿ ನೀರಿನ ಮಟ್ಟ ಏರಿಕೆಯಾಗಿ ಈ ಘಟನೆ ನಡೆದಿದೆ. ದೂಧ್‌ಸಾಗರ್ ಜಲಪಾತದಲ್ಲಿ ಸಿಲುಕಿಕೊಂಡಿದ್ದ ಸುಮಾರು 40 ಜನರನ್ನ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಮಳೆಯಿಂದಾಗಿ ಸದ್ಯ ಸೇತುವೆ ಕುಸಿದ ಸ್ಥಳದಲ್ಲಿ ಭಾರಿ ಪ್ರಮಾಣದ ನೀರು ಹರಿಯುತ್ತಿದೆ.
ಗೋವಾ-ಕರ್ನಾಟಕ ಗಡಿಯಲ್ಲಿ ಭಾರೀ ಮಳೆಯಿಂದಾಗಿ ದೂಧಸಾಗರ್ ಜಲಪಾತದಲ್ಲಿ ನೀರಿನ ಮಟ್ಟವು ಗಣನೀಯವಾಗಿ ಹೆಚ್ಚಾದ ಕಾರಣಕ್ಕೆ 40ಕ್ಕೂ ಹೆಚ್ಚು ಜನರು ಪ್ರವಾಹದಲ್ಲಿ ಸಿಲುಕಿಕೊಂಡರು. ದೃಷ್ಟಿ ಲೈಫ್ ಸೇವರ್ಸ್ ಅಲ್ಲಿ ಸಿಕ್ಕಿಬಿದ್ದ ವ್ಯಕ್ತಿಗಳಿಗೆ ತ್ವರಿತವಾಗಿ ಸಹಾಯ ಮಾಡಿ, ಅವರಿಗೆ ಸುರಕ್ಷಿತ ನೆಲೆಗಳನ್ನು ಒದಗಿಸಲಾಯಿತು.