Wednesday, January 22, 2025

ಯಾತ್ರೆ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್

ಬಳ್ಳಾರಿ : ಭಾರತ್ ಜೋಡೋ ಯಾತ್ರೆ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ನಾಲ್ವರಿಗೆ ಗಾಯಗಳಾಗಿರುವ ಘಟನೆ ಬಳ್ಳಾರಿಯ ಹೊಸ ಮೋಕಾ ಬಳಿ ನಡೆದಿದೆ.

ಅದೃಷ್ಟವಶಾತ್​ ಯಾರಿಗೂ ಯಾತ್ರೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ನಾಲ್ವರನ್ನು
ಶಾಸಕ ನಾಗೇಂದ್ರ ತಕ್ಷಣ ಮೋಕಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಮೋಕಾ ಪ್ರಾಥಮಿಕ ಆರೋಗ್ಯ ಆಸ್ಪತ್ರೆಗೆ ಸುರ್ಜೇವಾಲ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಇನ್ನು ಶಾರ್ಕ್​ ಸರ್ಕ್ಯೂಟ್ ಸಂಭವಿಸಿರುವ ವಿಚಾರಕ್ಕೆ ಶಾಸಕ. ಬಿ ನಾಗೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಗಾಯಾಳುಗಳಿಗೆ ತಲಾ ಒಂದು ಲಕ್ಷ ಕೊಡುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ರೆ ಬೆಂಗಳೂರಿಗೆ ಕಳುಹಿಸುವ ವ್ಯವಸ್ಥೆ ಮಾಡೋದಾಗಿ ತಿಳಿಸಿದ್ದಾರೆ. ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಹೆಚ್ಚಿನ ಚಿಕಿತ್ಸೆಗೆ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗುವುದು ಎಂದರು.

RELATED ARTICLES

Related Articles

TRENDING ARTICLES