ಚಿಕ್ಕಬಳ್ಳಾಪುರ: ಜೀವಂತ ಹಾವನ್ನು ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ ಆರೋಪದ ಕೇಳಿ ಬಂದ ಹಿನ್ನಲೆಯಲ್ಲಿ ಉರಗ ತಜ್ಞ ಪೃಥ್ವಿರಾಜ್ ಎಂಬುವವರು ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ದಾಖಲಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಇತ್ತೀಚಿಗೆ ಕಾರ್ಯಕ್ರಮ ಮಾಡಲಾಗಿತ್ತು. ಇದರಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ಭಾಗಿಯಾಗಿದ್ದರು.
ಚಿಕ್ಕಬಳ್ಳಾಪುರ ತಾಲೂಕಿನ ಜಾಲಾರಿ ನರಸಿಂಹಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಿರ್ಮಾಣವಾಗುತ್ತಿರುವ ಆದಿಯೋಗಿ ಧ್ಯಾನ ಕೇಂದ್ರದಲ್ಲಿ ಅಕ್ರಮವಾಗಿ ಹಾವನ್ನು ಹಿಡಿದು ಪೂಜೆ ಮಾಡಿದ ಕಾರಣಕ್ಕೆ ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ಕೇಸ್ ದಾಖಲಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಉಲ್ಲಂಘನೆಯಾಗಿದೆ. ಜಗ್ಗಿ ವಾಸುದೇವ್ ವಿರುದ್ಧ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.