Sunday, December 22, 2024

ವಿದ್ಯುತ್ ಶಾಕ್​; ಆರೋಗ್ಯ ವಿಚಾರಿಸಿ ಗಾಯಾಳುಗಳಿಗೆ 1 ಲಕ್ಷ ರೂ ಘೋಷಿಸಿದ ರಾಹುಲ್ ಗಾಂಧಿ​.!

ಬಳ್ಳಾರಿ: ಭಾರತ್ ಜೋಡೋ ಪಾದಯಾತ್ರೆ ವೇಳೆ ವಿದ್ಯುತ್ ಶಾಕ್​ ಹೊಡೆದು ಗಾಯಗೊಂಡಿದವರನ್ನ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಆರೋಗ್ಯ ವಿಚಾರಿಸಿದರು.

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿದ್ದ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಬಳ್ಳಾರಿಯ ಹೊಸ ಮೋಕಾ ಬಳಿ ನಾಲ್ವರಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ ಹೊಡೆದು ಗಾಯಗೊಂಡಿದ್ದರು. ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಾಯಿಸಿ ಮುಂದಾಗುವ ಅನಾವುತ ತಪ್ಪಿಸಲಾಗಿತ್ತು.

ರಾಹುಲ್ ಗಾಂಧಿ ಅವರು ಇಂದು ವಿದ್ಯುತ್ ಶಾಕ್​ ಹೊಡೆದು ಗಾಯಗೊಂಡು ದಾಖಲಾಗಿದ್ದ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ವೇಳೆ ರಾಹುಲ್​ ಗಾಯಾಳುಗಳ ಚಿಕಿತ್ಸೆ ವೆಚ್ಚ ಭರಿಸುವುದಾಗಿ ಹೇಳಿದರು. ಗಾಯಾಳುಗಳಿಗೆ ತಲಾ ಒಂದು ಲಕ್ಷ  ಈಗ ನೀಡಲಾಗುವುದು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ರೆ ಬೆಂಗಳೂರುಗೆ ಕಳುಹಿಸುವ ವ್ಯವಸ್ಥೆ ಮಾಡೋದಾಗಿ ತಿಳಿಸಿದ್ದಾರೆ ಎಂದು ಕಾಂಗ್ರೆಸ್​ ಶಾಸಕ ನಾಗೇಂದ್ರ ಹೇಳಿದರು.

ವಿದ್ಯುತ್​ ಶಾಕ್​ನಿಂದ ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಹೆಚ್ಚಿನ ಚಿಕಿತ್ಸೆಗೆ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗುವುದು. ಮೋಕಾ ಪ್ರಾಥಮಿಕ ಆರೋಗ್ಯ ಆಸ್ಪತ್ರೆಗೆ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಸುರ್ಜೇವಾಲ ಭೇಟಿ ನೀಡಿ ಹೇಳಿದರು.

RELATED ARTICLES

Related Articles

TRENDING ARTICLES