Wednesday, January 22, 2025

ನಟ ಚೇತನ್ ಅಹಿಂಸಾ​ ವಿರುದ್ಧ ಪ್ರಕರಣ ದಾಖಲು.!

ಉಡುಪಿ: ಭೂತ ಕೋಲ ಹಿಂದೂ ಸಂಸ್ಕೃತಿ ಭಾಗವಲ್ಲವೆಂದು ಇತ್ತೀಚಿಗೆ ನಟ ಚೇತನ್​ ಕುಮಾರ್​ ಅವರು ಸುದ್ದಿಗೋಷ್ಠಿ ನಡೆಸಿ ಕಾಂತಾರ ಸಿನಿಮಾ ಬಗ್ಗೆ ಮಾತನಾಡಿದ ನಂತರ ಉಡುಪಿಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ನಟ ಚೇತನ್​​ ಅವರ ಹಿಂದೂ ಧರ್ಮಕ್ಕೆ ದಕ್ಕೆಯಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಜಾಗರಣಾ ವೇದಿಕೆಯು ದೂರು ನೀಡಿ ಆಗ್ರಹಿಸಿದ್ದಾರೆ.

‘ಕಾಂತಾರ’ ಸಿನಿಮಾ ರಾಜ್ಯ ಸೇರಿದಂತೆ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಆದರೆ, ಇದು ನಿಜವಲ್ಲ. ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಚೇತನ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದರು.

RELATED ARTICLES

Related Articles

TRENDING ARTICLES