Saturday, April 20, 2024

ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಸಿಎಂ ಬಸವರಾಜ ಬೊಮ್ಮಾಯಿ

ಯಾದಗಿರಿ : ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ಜನವಿರೋಧಿ ಆಡಳಿತ ಖಂಡಿಸಿ ಈಗಾಗಲೇ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ಯಶಸ್ವಿಯಾಗಿ ಮುದುವರಿದಿದ್ದು, ಇದ್ದರಿಂದ ವಿಚಲಿತರಾಗಿರುವ ಆಡಳಿತಾರೂಢ ಬಿಜೆಪಿಯಿಂದ ಜನಸಂಕಲ್ಪ ಯಾತ್ರೆ ಆರಂಭವಾಗಿದೆ. ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಜನಸಂಕಲ್ಪ ಯಾತ್ರೆ ಹಮ್ಮಿಕೊಳ್ಳಲಾಗಿತ್ತು.

ಯಾದಗಿರಿ ಜಿಲ್ಲೆ ಹುಣಸಗಿ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಜನಸಂಕಲ್ಪ ಯಾತ್ರೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಇನ್ನೂ ಇದೇ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, 5 ಸಾವಿರ ರೂಪಾಯಿ ಕೋಟಿಯನ್ನ ಕೃಷ್ಣ ಮೇಲ್ದಂಡೆ ಯೋಜನೆ ಅಭಿವೃದ್ಧಿಗಾಗಿ ಕೊಟ್ಟಿದ್ದೇವೆ, 519 ಟಿಎಂಸಿ ನೀರಿಗಾಗಿ ಈ ವಿಚಾರ ಸುಪ್ರೀಂಕೋರ್ಟ್‌ನಲ್ಲಿದೆ ಅಂತಾ ಹೇಳಿದರು. ರಾಜ್ಯದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದ್ದು, BJPಗೆ ಮತ್ತೊಮ್ಮೆ ಅಧಿಕಾರ ಕೊಡುವಂತೆ ರಾಜ್ಯದ ಜನತೆಗೆ ಮನವಿ ಮಾಡಿದರು.

ಇನ್ನು ಯಾದಗಿರಿ ಜಿಲ್ಲೆಯಲ್ಲಿ ಜನಸಂಕಲ್ಪ ಯಾತ್ರೆ ಮುಗಿಸಿಕೊಂಡು ಸಿಎಂ ಬೊಮ್ಮಾಯಿ ನೇರವಾಗಿ ಹೆಲಿಕಾಪ್ಟರ್ ಮೂಲಕ ಕಲಬುರಗಿ ಜಿಲ್ಲೆ ಮಹಾಗಾಂವ್ ಪಟ್ಟಣಕ್ಕೆ ಆಗಮಿಸಿದರು. ಮಹಾಗಾಂವ್ ಪಟ್ಟಣದಲ್ಲಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಲು ಸಿಎಂ ಬೊಮ್ಮಾಯಿಗೆ ಮಳೆರಾಯ ಅಡ್ಡಿಪಡಿಸಿದ. ಕೂಡಲೇ ಪರಿಸ್ಥಿತಿಯ ತೀವ್ರತೆ ಅರಿತ ಸಿಎಂ ಬೊಮ್ಮಾಯಿ, ನೇರವಾಗಿ ವೇದಿಕೆಗೆ ಆಗಮಿಸಿ ಭಾಷಣ ಮಾಡಿದರು. ಈ ವೇಳೆ ಮಾತನಾಡಿದ ಬೊಮ್ಮಾಯಿ, ಕಾಂಗ್ರೆಸ್ ನಾಯಕರು ಸಾವಿರಾರು ಎಕರೆ ವಕ್ಫ್ ಆಸ್ತಿ ನುಂಗಿ ನೀರು ಕುಡಿದಿದ್ದಾರೆಂದು ಹರಿಹಾಯ್ದರು. ಇದರ ಬಗ್ಗೆ ಇನ್ನಷ್ಟು ತನಿಖೆ ಅಗತ್ಯವಿದ್ದು, ಸದ್ಯದಲ್ಲೆ ತನಿಖೆಗೆ ಆದೇಶ ಹೊರಡಿಸುವೆ ಅಂತಾ ಹೇಳಿದರು. ಇನ್ನೂ ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ದ್ರೋಹ ಮಾಡಿದ್ದು, ಕಾಂಗ್ರೆಸ್ ಮುಳುಗುತ್ತಿರುವ ಹಡಗು ಅಂತಾ ಸಿಎಂ ಬೊಮ್ಮಾಯಿ ಹೇಳಿದರು. ಮುಳುಗುವ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಕೈಗೆ ಸ್ಟೇರಿಂಗ್ ಕೊಟ್ಟಿದ್ದಾರೆಂದು ವಾಗ್ದಾಳಿ ನಡೆಸಿದರು.

ಅದೇನೇ ಇರಲಿ, ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವಾಗಲೇ ರಾಜ್ಯದಲ್ಲಿ ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರಲು ರಾಜ್ಯ ಬಿಜೆಪಿ ಭಾರೀ ಕಸರತ್ತು ಮಾಡುತ್ತಿದೆ.

ಅನಿಲ್‌ಸ್ವಾಮಿ ಪವರ್ ಟಿವಿ ಕಲಬುರಗಿ

RELATED ARTICLES

Related Articles

TRENDING ARTICLES