Monday, December 23, 2024

ನ. 1 ಕ್ಕೆ ಪುನೀತ್​ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ; ಸಿಎಂ ಬೊಮ್ಮಾಯಿ

ಬೆಂಗಳೂರು: ದಿವಂಗತ ಪುನೀತ್ ರಾಜ್​ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡಲು ತೀರ್ಮಾನ ಆಗಿದೆ. ನವೆಂಬರ್ 1 ರಂದು ಪ್ರಶಸ್ತಿ‌ ನೀಡುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನವೆಂಬರ್ 1 ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ನಟ ಪುನೀತ್​ ರಾಜ್​ಕುಮಾರ್​ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು. ಈ ಸಭೆಯಲ್ಲಿ ರಾಜ್‌ಕುಮಾರ್ ಕುಟುಂಬದ ಸದಸ್ಯರು ಭಾಗಿಯಾಗಲಿದ್ದಾರೆ ಎಂದರು.

2009 ರ ನಂತರ ಯಾರಿಗೂ ಕೂಡ ಕರ್ನಾಟಕ ರತ್ನ ಪ್ರಶಸ್ತಿ ನೀಡಿರಲಿಲ್ಲ. ಈಗಾಗಲೇ 8 ಜನರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡಲಾಗಿದೆ. ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಪುನೀತ್ ನಿಜವಾಗಿಯೂ ಕರ್ನಾಟಕ ರತ್ನ
ಯುವಜನತೆಗೆ ಸದಾ ಪ್ರೇರಣೆ ನೀಡುತ್ತಿದ್ದರು. ಹಾಗಾಗಿ ಪುನೀತ್ ಹೆಸರು ಚಿರಸ್ಥಾಯಿಯಾಗಬೇಕು, ಪ್ರೇರಣೆಯಾಗಬೇಕು ಎಂದು ಈ ಪುರಸ್ಕಾರ ನೀಡಲಾಗುತ್ತಿದೆ ಎಂದು ಸಿಎಂ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಹಲವಾರು ಶ್ರೇಷ್ಠ ಸಾಹಿತಿಗಳು, ಮುಖ್ಯ ಅತಿಥಿಗಳು, ನಟರು, ಸಚಿವರು, ಶಾಸಕರು, ಹಿರಿಯ ರಾಜಕಾರಣಿಗಳು ಭಾಗಿಯಾಗುತ್ತಾರೆ. ಈ ಕಾರ್ಯಕ್ರಮದ ಅರ್ಥಪೂರ್ಣ ಮಾಡಲಿದ್ದೇವೆ.

ನವೆಂಬರ್ 1 ಆದಮೇಲೆ ಬೆಂಗಳೂರಿನಲ್ಲಿ ಮೂರು ಕಾರ್ಯಕ್ರಮ ಮಾಡಲಿದ್ದೇವೆ. 10 ದಿನಗಳ ಹಂತರದಲ್ಲಿ ಬೆಂಗಳೂರಿನ ಮೂರು ಭಾಗಗಳಲ್ಲಿ ಅಪ್ಪು ಕಾರ್ಯಕ್ರಮ ಮಾಡಲು ತೀರ್ಮಾನ ಮಾಡಲಿದ್ದೇವೆ ಎಂದು ಸಿಎಂ ತಿಳಿಸಿದರು.

RELATED ARTICLES

Related Articles

TRENDING ARTICLES