ಬೆಂಗಳೂರು: ಸಂಸ್ಕ್ರತಿ ಇಲ್ಲದವರು ಸಂಸ್ಕ್ರತಿ ಬಗ್ಗೆ ಮಾತನಾಡಬಾರದು ಎಂದು ಸಚಿವ ಸುನೀಲ್ ಕುಮಾರ್ ಅವರು ನಟ ಚೇತನ್ ಗೆ ಟಾಂಗ್ ನೀಡಿದರು.
ಕನ್ನಡ ಚಿತ್ರರಂಗದ ನಟ ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಚಿತ್ರ ವಿಶ್ವದಾದ್ಯಂತ ಭಾರಿ ಸದ್ದು ಮಾಡುತ್ತಿದೆ. ಈ ಸಿನಿಮಾದಲ್ಲಿ ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರಿದ್ದೆಂದು ರಿಷಬ್ ಶೆಟ್ಟಿ ಹೇಳಿದ್ದಾರೆ. ಅದು ನಿಜವಲ್ಲ. ಪರವರ ಬಹುಜನ ಸಂಪ್ರದಾಯಗಳು, ವೈದಿಕ ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತಲೂ ಹಿಂದಿನದ್ದಾಗಿದೆ. ಮೂಲ ನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲಾಗಲಿ ಅದರಾಚೆಯಾಗಲಿ ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ಕೇಳುತ್ತೇವೆ ಎಂದು ಚೇತನ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.
ಈ ಬಗ್ಗೆ ಇಂದು ಮಾತನಾಡಿದ ಅವರು, ದೈವ ನರ್ತನ ಹಿಂದು ಸಂಸ್ಕ್ರತಿ ಭಾಗವಾಗಿದೆ. ನಮ್ಮ ಸಂಸ್ಕ್ರತಿ ಭಾಗ ಇದನ್ನು ಮಗ್ತಷ್ಟು ಗಟ್ಟಿ ಮಾಡುತ್ತೇವೆ ಎಂದರು.
ಸಂಸ್ಕೃತಿ ಇಲ್ಲದವರು ಸಂಸ್ಕೃತಿ ಬಗ್ಗೆ ಮಾತಾಡಬಾರದು. ದೈವಾರಾಧನೆ ನಮ್ಮ ತುಳುನಾಡಿನ ಸಾಂಸ್ಕೃತಿಕ ಪ್ರತಿಬಿಂಬವಾಗಿದೆ. ಯಾರೋ ಒಬ್ಬ ವ್ಯಕ್ತಿ ಹಾಗೆ ಹೇಳಿದ್ರೆ ಆ ಸಂಸ್ಕೃತಿಯಿಂದ ದೂರ ಆಗೋದಿಲ್ಲ. ಭೂತಾರಾಧನೆ ಹಿಂದೂ ಸಂಸ್ಕೃತಿಯ ಗಟ್ಟಿಯಾದ ಭಾಗವಾಗಿದೆ ಎಂದು ಹೇಳಿದರು.
ಇನ್ನು ಭೂತಾರಾಧನೆ ಮಾಡುವ 60 ವರ್ಷ ತುಂಬಿದ ದೈವನರ್ತಕರಿಗೆ ಸರ್ಕಾರದಿಂದ ಮಾಸಾಶನ ಕೊಡುವ ತೀರ್ಮಾನ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಪ್ರತಿ ತಿಂಗಳು 2 ಸಾವಿರ ಮಾಸಾಶನ ಕೊಡಲು ನಿರ್ಧಾರ ಎಂದು ಈ ವೇಳೆ ಸಚಿವರು ತಿಳಿಸಿದರು.