ಬೆಂಗಳೂರು : ಚಾಮರಾಜಪೇಟೆ ಮೈದಾನ ವಿವಾದದ ಕೇಂದ್ರ ಬಿಂದುವಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ದಿನದಂದೇ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿಸಬೇಕೆಂಬ ಹಿಂದೂ ಸಂಘಟನೆಗಳ ಕನಸು ನನಸಾಗಿದೆ. ಸದ್ಯ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸುಪ್ರೀಂ ಕೋರ್ಟ್ ಅನುಮತಿ ಕೊಟ್ಟಿರಲಿಲ್ಲ. ಇದೀಗ ಮೈದಾನದಲ್ಲಿ ಕನ್ನಡ ಬಾವುಟ ಹಾರಿಸಿ ರಾಜ್ಯೋತ್ಸವ ಆಚರಿಸಬೇಕೆಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟ ಮನವಿ ಮಾಡಿಕೊಂಡಿದೆ.
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅವಕಾಶ ಕೊಡಬೇಕು ಎಂಬ ಕೂಗು ಎದ್ದಿದೆ. ಮೈದಾನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಬಾವುಟ ಹಾರಾಡಬೇಕು ಅಂತ ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿದೆ. ಧ್ವಜಾರೋಹಣ, ಗಣೇಶೋತ್ಸವ ಮುಗಿದರೂ ಈ ಗಲಾಟೆ ಮಾತ್ರ ತಣ್ಣಗಾಗುವಂತೆ ಕಾಣುತ್ತಿಲ್ಲ. ಕನ್ನಡ ಸಾಹಿತ್ಯ ಪರಿಷತ್‌ನಿಂದ ನಾಡಧ್ವಜ ಹಾರಿಸುವಂತೆ ಒತ್ತಡ ಹೇರಲಾಗಿದೆ.ಈ ಬಗ್ಗೆ ಸರ್ಕಾರಕ್ಕೆ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಮನವಿ ಮಾಡಿದೆ.
ಸ್ವಾತಂತ್ರ್ಯ ದಿನಾಚರಣೆ, ಗಣೇಶೋತ್ಸವ ಗದ್ದಲ ಮುಗೀತು ಅನ್ನುವಷ್ಟರಲ್ಲಿಯೇ ಇದೀಗ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಬೇಕೆಂಬ ಹೊಸ ವಿವಾದ ಎದ್ದಿದೆ. ಈ ಸಂಬಂಧ ರಾಜ್ಯ ಸರ್ಕಾರ ಕೋರ್ಟ್‌ಗೆ ಮೇಲ್ಮನವಿ ಹೋಗುವ ಸಾಧ್ಯತೆ ಇದ್ದು, ಅನುಮತಿ ನೀಡುವ ವಿಚಾರದಲ್ಲಿ ಕೋರ್ಟ್ ಹಾಗೂ ಸರ್ಕಾರ ಯಾವ ನಿಲುವು ತಾಳಲಿದೆ ಅನ್ನೋದು ಕುತೂಹಲ ಕೆರಳಿಸಿದೆ.
ಕೃಷ್ಣಮೂರ್ತಿ ಪವರ್ ಟಿವಿ ಬೆಂಗಳೂರು.