Friday, May 17, 2024

ಶಿವರಾಜ್​ಕುಮಾರ್​ ನಟನೆಯ ‘ವೇದ’ ಚಿತ್ರದ ಪೋಸ್ಟರ್​ ರಿಲೀಸ್​

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವ ರಾಜ್​​ಕುಮಾರ್ ಅಭಿನಯದ 125ನೇ ‘ವೇದ’ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ ಮಾಡುವುದರ ಜೊತೆಗೆ ಈ ಸಿನಿಮಾ ಬಿಡುಗಡೆ ಡೇಟ್ ಅನ್ನು ಅನೌನ್ಸ್​ ಮಾಡಿದೆ.

ಹರ್ಷ ಆ್ಯಕ್ಷನ್ ಕಟ್ ಹೇಳಿರುವ ವೇದ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಕ್ರಿಸ್ಮಸ್ ಹಬ್ಬಕ್ಕೂ ಮುನ್ನ ಅಂದರೆ ಡಿ. 23ಕ್ಕೆ ಕನ್ನಡ, ತಮಿಳು ಮತ್ತು ತೆಲುಗು ಮೂರು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಶಿವರಾಜ್ ಕುಮಾರ್ ನಟನೆಯ ಹಾಗೂ ಹರ್ಷ ಆ್ಯಕ್ಷನ್​ ಕಟ್​ ಹೇಳಿರುವ ಈ ಜೋಡಿಯ 4ನೇ ಚಿತ್ರವಾಗಿದ್ದು, ಶಿವ ರಾಜ್​ಕುಮಾರ್ ಎರಡು ಶೇಡ್​ನಲ್ಲಿ ಕಾಣಿಸಿಕೊಂಡಿದ್ದಾರೆ. ವೇದ ಸಿನಿಮಾ 1960ರ ದಶಕದಲ್ಲಿ ನಡೆದ ಕಥೆ ಆಧಾರಿತ ಸಿನಿಮಾವಾಗಿದೆ.

ಶಿವರಾಜ್ ಕುಮಾರ್ ಜೊತೆಗೆ ಗಾನವಿ ಲಕ್ಷ್ಮಣ್, ಶ್ವೇತಾ ಚೆಂಗಪ್ಪ, ಅರುಣ್ ಸಾಗರ್ ಮಗಳು ಅದಿತಿ ಸಾಗರ್ ಹಾಗೂ ಅನುಪಮಾ ಪೋಸ್ಟರ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಕುರಿ ಪ್ರತಾಪ್, ಜಗ್ಗಪ್ಪ, ಉಮಾಶ್ರಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೋಷನ್ ಪೋಸ್ಟರ್ ಅನ್ನು ಕಿಚ್ಚಿನ ನಡುವೆ ರೂಪಿಸಲಾಗಿದೆ.

RELATED ARTICLES

Related Articles

TRENDING ARTICLES