Saturday, December 28, 2024

ಗ್ಯಾಸ್ ಟ್ಯಾಂಕರ್ ಪಲ್ಟಿ ತಪ್ಪಿದ ಭಾರೀ ಅನಾಹುತ

ಹಾಸನ: ಸ್ಕಾರ್ಪಿಯೋ ಕಾರಿಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಹೋಗಿ ಗ್ಯಾಸ್ ಟ್ಯಾಂಕರ್ ಮಗುಚಿ ಬಿದ್ದ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿ ಕ್ರಾಸ್ ಬಳಿ ನಡೆದಿದೆ.

ಮಂಗಳೂರು ಕಡೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಟ್ಯಾಂಕರ್, ಸಕಲೇಶಪುರಕ್ಕೆ ಕಡೆಗೆ ಬರುತ್ತಿದ್ದ ಸ್ಕಾರ್ಪಿಯ ಕಾರ್​ಗೆ ಡಿಕ್ಕಿಯಾಗೋವುದನ್ನ ತಪ್ಪಿಸಲು ಹೋದ ಟ್ಯಾಂಕರ್ ಚಾಲಕ ಕೂದಲೆಳೆ ಅಂತರದಲ್ಲಿ ಟ್ರಾನ್ಸ್‌ಫಾರಮ್ ಗೆ ಡಿಕ್ಕಿ ಆಗುವುದು ತಪ್ಪಿಸಿದ್ದಾನೆ.

ಈ ಅಪಘಾತದಲ್ಲಿ ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲ ಸಂಭವಿಸಿಲ್ಲ ಎಂದು ಸ್ಥಳೀಯರಿಂದ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಟ್ಯಾಂಕರ್ ಗ್ಯಾಸ್ ಲೀಕ್ ಆಗುತ್ತಿದೆಯೋ ಇಲ್ಲವೋ ಎಂಬುದರ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES