ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಳವಾದ ಹಿನ್ನಲೆಯಲ್ಲಿ ಇಂದಿನಿಂದ ಅ. 24ರವರೆಗೆ ಉತ್ತರ ಒಳನಾಡಿನಲ್ಲಿ ಮಳೆ ಮುಂದುವರೆಯಲಿದೆ.
ಬೆಂಗಳೂರು, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇನ್ನೂ 3 ದಿನ ಹಳದಿ ಅಲರ್ಟ್ ಘೋಷಣೆ ಮಾಡಿದ್ದಾರೆ.
ಅದಲ್ಲದೇ, ಇಂದು ಕೂಡ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದ್ದು, ನಗರದಲ್ಲಿ ಈ ವರ್ಷ 1,706 ಮಿಮೀ ದಾಖಲೆಯ ಮಳೆಯಾಗಿದೆ. 2017ರಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 1,696 ಮಿಮೀ ಮಳೆಯಾಗಿತ್ತು.