Monday, November 25, 2024

ನವೆಂಬರ್ 11ಕ್ಕೆ ನಾಡಪ್ರಭು ಕೆಂಪೇಗೌಡ ಪ್ರತಿಮೆ ಅನಾವರಣ

ದೇವನಹಳ್ಳಿ; ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 108 ಅಡಿಯ ಕಂಚಿನ ಕೆಂಪೇಗೌಡ ಪ್ರತಿಮೆ ಅನಾವರಣಕ್ಕೆ ಸಿದ್ಧವಾಗಿದೆ. ಪುತ್ಥಳಿಯನ್ನ ನವೆಂಬರ್ 11ರಂದು ಪ್ರಧಾನಿ ಮೋದಿ ಉದ್ಘಾಟನೆ ಮಾಡಲಿದ್ದಾರೆ.‌ ಈ ಹಿನ್ನೆಲೆಯಲ್ಲಿ ಸಚಿವ ಅಶ್ವತ್ಥ್​ ನಾರಾಯಣ್, ಆರ್.ಅಶೋಕ್ ಮತ್ತು ಡಾ.ಕೆ.ಸುಧಾಕರ್ ಸ್ಥಳ ಪರಿಶೀಲನೆ ನಡೆಸಿದರು. ಪ್ರತಿಮೆ ಅನಾವರಣ ಸ್ಥಳ ಹಾಗೂ ಕಾರ್ಯಕ್ರಮದ ಎರಡು ಸ್ಥಳಗಳನ್ನು ಪರಿಶೀಲನೆ ನಡೆಸಿದ್ದಾರೆ. ಇನ್ನೂ ವೇದಿಕೆ ಕಾರ್ಯಕ್ರಮವನ್ನು ಏರ್​ಪೋರ್ಟ್​ನ ಒಳ ಭಾಗದಲ್ಲೇ ಮಾಡಬೇಕೆಂದು ಸಚಿವರು ಪಟ್ಟು ಹಿಡಿದು ಸ್ಥಳ ಪರಿಶೀಲನೆ ನಡೆಸಿದರು.

ಇನ್ನೂ ಕಾರ್ಯಕ್ರಮದಲ್ಲಿ 2 ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ.. ಏರ್​ಪೋರ್ಟ್​​ನಲ್ಲಿ ಪಾರ್ಕಿಂಗ್, ಊಟದ ವ್ಯವಸ್ಥೆ ಮಾಡಲು ಸಾಧ್ಯವಾಗುವುದಿಲ್ಲ. ಆದ್ರಿಂದ ಊಟದ ವ್ಯವಸ್ಥೆ ಹಾಗೂ ಪಾರ್ಕಿಂಗ್ ವ್ಯವಸ್ಥೆಗೂ ಸ್ಥಳ ಪರಿಶೀಲನೆ ಮಾಡಲಾಗಿದೆ. ಇದು ಪ್ರಧಾನಿ ಮೋದಿ ಕಾರ್ಯಕ್ರಮ ಆದ ಕಾರಣ ಭದ್ರತೆ ಕಾರಣದಿಂದ ಕೇಂದ್ರದ ತಂಡ ಪರಿಶೀಲನೆಯ ನಂತರವಷ್ಟೇ ಕಾರ್ಯಕ್ರಮದ ರೂಪುರೇಷೆಗಳು ಅಂತಿಮವಾಗುತ್ತವೆ. ಸದ್ಯಕ್ಕೆ ವೇದಿಕೆ ಕಾರ್ಯಕ್ರಮಕ್ಕೆ ರನ್ ವೇ 2 ರ ಬಳಿ ಹಾಗೂ ಏರ್​​ಪೋರ್ಟ್​​ನ ಹೊರಭಾಗ ಬಿಸಿನೆಸ್ ಪಾರ್ಕ್ ಬಳಿ ಎರಡು ಸ್ಥಳಗಳನ್ನು ಪರಿಶೀಲನೆ ನಡೆಸಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆ ನಿಟ್ಟಿನಲ್ಲಿ ಒಕ್ಕಲಿಗರ ಮತ ಸೆಳೆಯಲು 108 ಅಡಿಯ ಕೆಂಪೇಗೌಡರ ಪ್ರತಿಮೆ ಅನಾವರಣ ಆಗಲಿದೆ.. ಪ್ರಧಾನಿ ಮೋದಿ ಉದ್ಘಾಟನೆ ಮಾಡ್ತಿರೋದ್ರಿಂದ ಈ ಪ್ಲಾನ್ ಎಷ್ಟರ ಮಟ್ಟಿಗೆ ವರ್ಕೌಟ್ ಆಗುತ್ತೆ ಅನ್ನೋದು ಕಾದು ನೋಡಬೇಕಿದೆ.

RELATED ARTICLES

Related Articles

TRENDING ARTICLES