Monday, December 23, 2024

ಮತ್ತೊಮ್ಮೆ ತನ್ನ ಕಾರ್ಣಿಕವನ್ನು ತೋರಿಸಿದ ಕೊರಗಜ್ಜ

ಮಂಗಳೂರು: ತುಳುನಾಡಿನಲ್ಲಿ ಸಾಕಷ್ಟು ಮಹಿಮೆಗೆ ಸಾಕ್ಷಿಯಾಗಿರುವ ಕೊರಗಜ್ಜ ತನ್ನ ನಂಬಿ ಬರುವ ಭಕ್ತಾಧಿಗಳ ಕೈಬಿಡುವುದಿಲ್ಲ. ಈಗ ಕೊರಗಜ್ಜ ತಮ್ಮ ಮಹಿಮೆಯನ್ನು ಮತ್ತೋಮ್ಮೆ ತೋರಿಸಿದ್ದಾರೆ.

ತುಳುನಾಡಿನ ಕೊರಗಜ್ಜ ಸ್ವಾಮಿ ಮತ್ತೊಮ್ಮೆ ತನ್ನ ಕಾರ್ಣಿಕವನ್ನು ತೋರಿಸಿಕೊಟ್ಟಿದೆ. ನಂಬಿದವರನ್ನು ಹರಸಿ ,ಇಷ್ಟಾರ್ಥಗಳನ್ನು ಈಡೇರಿಸುವ ಕೊರಗಜ್ಜ ಆರಿ ಹೋಗುತ್ತಿದ್ದ ಕುಟುಂಬವೊಂದರ ನಂದದೀಪವನ್ನು ಬೆಳಗಿಸಿಕೊಟ್ಟಿರುವ ಅಪರೂಪದ ಘಟನೆಗೆ ತುಳುನಾಡು‌ ಸಾಕ್ಷಿಯಾಗಿದೆ.

ನಾಲ್ಕು ತಿಂಗಳ ಹಸುಕೂಸೊಂದು ಕೊರಗಜ್ಜನ ಕೃಪೆಯಿಂದ ಸಾವನ್ನೇ ಗೆದ್ದು ಬಂದಿದೆ. ಹೌದು ಸಾಗರ ಮೂಲದ ಪುಟ್ಟ ಹೆಣ್ಣು ಮಗುವಿಗೆ ವಿಪರೀತ ಜ್ವರ ಕಂಡು ಬಂದಿತ್ತು. ಎರಡು ದಿನ ಕಳೆದರೂ ಜ್ವರ ಕಡಿಮೆಯಾಗದೇ ಮಗು ಅಳು ನಿಲ್ಲಿಸುತ್ತಿರಲ್ಲಿಲ್ಲ. ಹೀಗಾಗಿ‌ ಕುಂದಾಪುರದ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅಸ್ಪತ್ರೆಯಲ್ಲಿ ಮಗುವಿಗೆ ಪಿಡ್ಸ್ ಇರುವುದಾಗಿಯೂ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಅಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ ಹಿನ್ನಲೆಯಲ್ಲಿ ಕೆ ಎಂಸಿಗೆ ದಾಖಲಿಸಲಾಗಿತ್ತು.

ಐಸಿಯು ನಲ್ಲಿದ್ದ ಮಗುವಿನ ಅರೋಗ್ಯ ಚಿಂತಾಜನಕವಾಗಿತ್ತು. ಅಷ್ಟೇ ಅಲ್ಲ ಪದೇ ಪದೇ ಮಗುವಿನ ಹೃದಯ ಸ್ತಬ್ತವಾಗುತ್ತಿರುವುದರ ಬಗ್ಗೆ ವೈದರು  ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ವೈದರ ಪ್ರಯತ್ನ ಮಾಡುವುದಾಗಿಯೂ ಭರವಸೆ ನೀಡಿದರೂ ಮಗುವಿನ ಪ್ರಾಣ ಉಳಿಯುವ ಬಗ್ಗೆ  ಸಂಶಯ ವ್ಯಕ್ಯಪಡಿಸಿದ್ದರು‌.

ಮಗುವಿನ ಪರಿಸ್ಥಿತಿ ಕಂಡ ಕುಟುಂಬಸ್ಥರು ಕಂಗಾಲಾಗಿ ಹೋಗಿದ್ದರು‌. ಅಷ್ಟರಲ್ಲಿ ಅಸ್ಪತ್ರೆ ಬಳಿಯಿದ್ದ ಒರ್ವ ವ್ಯಕ್ತಿ ಕೊರಗಜ್ಜ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸುವಂತೆ ಹೇಳಿದ ಹಿನ್ನಲೆಯಲ್ಲಿ ಮಗುವಿನ ಹೆತ್ತವರು ಇಂದ್ರಾಳಿ ,ಎಂಜಿಎಂ ಹಾಸ್ಟೆಲ್ ಬಳಿಯಿರುವ ಕೊರಗಜ್ಜನ ಕ್ಷೇತ್ರಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾಧ ಪಡೆದು ತೆರಳಿದ್ದರು.

ಗಂಭೀರ ಸ್ಥಿತಿಯಲ್ಲಿದ್ದ ಪುಟ್ಟ ಕಂದಮ್ಮನ ಅರೋಗ್ಯ ಧೀಢಿರಾಗಿ ಚೇತರಿಕೆ ಕಾಣಿಸಿಕೊಳ್ಳಲು ಪ್ರಾರಂಭಿಸಿತ್ತು. ವೈದರು ಕೂಡ ತಮ್ಮ ಕೈಲಾದ ಪ್ರಯತ್ನಗಳನ್ನು ಮಾಡುವ ಮೂಲಕ ಹತ್ತೊಂಬತ್ತು ದಿನಗಳಲ್ಲಿ ಮಗು ಅರೋಗ್ಯವಾಗಿ ಹೆತ್ತಮ್ಮಳ ಕೈಯಲ್ಲಿ ಮತ್ತೆ ಬಂದು ಸೇರಿತು.

ಹೃದಯ ಬಡಿತವೇ ನಿಂತು ಹೋಯಿತು ಎಂದಿದ್ದ ಮಗ ಮತ್ತೆ ಕಿಲ ಕಿಲ‌ ಎಂದು ನಗುತ್ತಿರುವುದನ್ನ ಕಂಡ ಕುಟುಂಬಸ್ಥರ ಸಂತೋಷ ಮುಗಿಲು ಮುಟ್ಟಿತ್ತು.

ಇದಕ್ಕೆಲ್ಲ ಕಾರಣ ನಂಬಿದ ಕೊರಗಜ್ಜ ಎನ್ನುವುದು ಕುಟುಂಬಸ್ಥರ ನಂಬಿಕೆ, ಹೀಗಾಗಿ ಅಸ್ಪತ್ರಯಿಂದ ನೇರವಾಗಿ ಇಂದ್ರಾಳಿ ಬಳಿಯ ಕೊರಗಜ್ಜನ ಕ್ಷೇತ್ರಕ್ಕೆ ಬಂದು ಮಗುವನ್ನು ಕೊರಗಜ್ಜ ಸ್ವಾಮಿಯ ಮುಂದಿಟ್ಟು  ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಪಡೆದುಕೊಂಡರು. ಬದುಕಿರುವವರೆಗೂ ಈ ಮಗು ಕೊರಗಜ್ಜನ ಪ್ರಸಾದವೆಂದೇ ನಂಬಿ ಬದುಕುತ್ತೇವೆ ಎಂದು ಹೇಳುತ್ತಾ ಅನಂದ ಭಾಷ್ಟಗಳೊಂದಿಗೆ ತನ್ನೂರಿಗೆ ತೆರಳಿದ್ದಾರೆ.

RELATED ARTICLES

Related Articles

TRENDING ARTICLES