ಇಡೀ ದೇಶದಲ್ಲಿ ದೀಪಾವಳಿ ಹಬ್ಬದ ಸಡಗರ ಮನೆ ಮಾಡಿದೆ. ಈ ದೀಪಾವಳಿಯು ಭಾರತದಲ್ಲಿ ಅತ್ಯಂತ ವ್ಯಾಪಕವಾಗಿ ಆಚರಿಸಲಾಗುವ ಹಬ್ಬಗಳಲ್ಲಿ ಒಂದಾಗಿದೆ. ಇದು ದೇಶದಲ್ಲಿ ಹಬ್ಬದ ಋತುವಿನ ಆರಂಭವನ್ನು ಸೂಚಿಸುತ್ತದೆ.
ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದ ಸಂದರ್ಭದಲ್ಲಿ ಹಲವು ರಾಜಕಾರಣಿಗಳು ಮತ್ತು ಮುಖಂಡರು ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು ದೇಶದ ಜನರಿಗೆ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಈ ಸಂದರ್ಭದಲ್ಲಿ ಭಾರತೀಯರಿಗೆ ಶುಭಾಶಯ ಕೋರಿದ್ದಾರೆ.
ನಾಡಿನ ಸಮಸ್ತ ಜನತೆಗೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ದಿಕ ಶುಭಾಶಯಗಳು. ಸರ್ವರ ಬಾಳಲ್ಲಿ ಸಂಕಷ್ಟಗಳು ದೂರವಾಗಿ, ಸುಖ, ಶಾಂತಿಃ ಹಾಗೂ ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.