Wednesday, January 22, 2025

ನವೆಂಬರ್​​’ನಲ್ಲಿ ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಸಿಎಂ ಚಾಲನೆ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ಪ್ರತಿಮೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಕಾರ್ಯಾದೇಶ ನೀಡುವ ಹಂತದಲ್ಲಿದ್ದು, ನವೆಂಬರ್ ತಿಂಗಳಲ್ಲಿ ಅಡಿಗಲ್ಲು ಹಾಕಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಸಿಎಂ ಬೊಮ್ಮಾಯಿ ಅವರು ಇಂದು ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕಿತ್ತೂರು ಕೋಟೆಯ ಪಕ್ಕದಲ್ಲಿ 115 ಕೋಟಿ ರೂ. ವೆಚ್ಚದಲ್ಲಿ ಅರಮನೆ ನಿರ್ಮಿಸಲಾಗುವುದು ಎಂದು ಅವರು ತಿಳಿಸಿದರು.

ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಪ್ರಥಮ ಬಾರಿಗೆ ಧ್ವನಿ ಎತ್ತಿದ ವೀರರಾಣಿ ಮಹಿಳೆ ಕಿತ್ತೂರು ಚನ್ನಮ್ಮ. ಬ್ರಿಟಿಷರ ವಿರುದ್ಧ ಧ್ವನಿ ಎತ್ತುವ ಧೈರ್ಯ ಆ ಸಮಯದಲ್ಲಿ ಯಾರಿಗೂ ಇರಲಿಲ್ಲ. ಚನ್ನಮ್ಮ ಬರೀ ಧ್ವನಿ ಅಷ್ಟೆ ಅಲ್ಲಾ ತಲೆ ಎತ್ತಿ ಹೋರಾಡಿದ್ದು ಸುವರ್ಣ ಅಕ್ಷರಗಳಲ್ಲಿ ಬರೆದಿಡಬೇಕು ಎಂದರು.

ನಿನ್ನೆಯಿಂದ ಕಿತ್ತೂರು ಉತ್ಸವ ಚಾಲನೆ ನೀಡಬೇಕಿತ್ತು. ಆದರೆ, ಸಹೋದರ ಸವದತ್ತಿ ಶಾಸಕ ಆನಂದ ಮಾಮನಿ ನಿಧನ ಹಿನ್ನೆಲೆ ಉತ್ಸವ ಚಾಲನೆ ವಿಳಂಬವಾಗಿ ಇಂದು ಚಾಲನೆ ನೀಡಿದ್ದೇವೆ ಎಂದು ಸಿಎಂ ತಿಳಿಸಿದರು.

RELATED ARTICLES

Related Articles

TRENDING ARTICLES