Wednesday, January 22, 2025

ಭಾರತ್​ ಜೋಡೋಗಿಂತ, ಕಾಂಗ್ರೆಸ್ ಜೋಡೋ ಮಾಡಬೇಕು; ಸಿ.ಎಂ ಇಬ್ರಾಹಿಂ

ವಿಜಯಪುರ; ಭಾರತ ಜೋಡೋಕ್ಕಿಂತ ಮೊದಲು ದೇಶದಲ್ಲಿ ಕಾಂಗ್ರೆಸ್ ಜೋಡೋ ಮಾಡಬೇಕು ಎಂದು ಕಾಂಗ್ರೆಸ್ ವಿರುದ್ಧ ಸಿ.ಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ.

ಇಂದು ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು, ಭಾರತ ಜೋಡೋಗಿಂತ ಮೊದಲು ಕಾಂಗ್ರೆಸ್​ ಜೋಡೋ ಮಾಡುವಂತೆ ರಾಹುಲ್ ಗಾಂಧಿಗೆ ಮೊದಲು ಹೇಳಿದ್ದೆ ಎಂದರು.

ಇನ್ನು ರಾಜ್ಯ ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷ ಆಗಿದ್ದು ಸಂತಸ ತಂದಿದೆ. ನಾನು ಹೇಳಿದಂತೆ ಖರ್ಗೆ ಎಐಸಿಸಿ ಅಧ್ಯಕ್ಷ ಆಗಿದ್ದಾರೆ. ಕರ್ನಾಟಕ, ದೇಶಕ್ಕೆ ಒಳ್ಳೆಯದು ಮಾಡ್ಲಿ ಎಂದು ಖರ್ಗೆಗೆ ಹೇಳಿದ್ದೇನೆ. ಕಾಂಗ್ರೆಸ್ ಪಕ್ಷ ಪ್ರಾದೇಶಿಕ ಪಕ್ಷಕ್ಕಿಂತ ವೀಕ್​ ಆಗಿದೆ ಎಂದು ಅಭಿಪ್ರಾಯಪಟ್ಟರು.

ಅಂತೆಯೇ ಮಾತನಾಡಿ, ರಾಜ್ಯದಲ್ಲಿ ಮುಂದಿನ ವಿಧಾನಸಭೆಯಲ್ಲಿ ಜೆಡಿಎಸ್ ಮೊದಲ ಸ್ಥಾನ. ಬಿಜೆಪಿ ಎರಡನೇ ಸ್ಥಾನ, ಕಾಂಗ್ರೆಸ್ ಮೂರನೇ ಸ್ಥಾನದಲ್ಲಿ ಇದೆ. ಕಾಂಗ್ರೆಸ್ ಪಕ್ಷದಲ್ಲಿ 80 ಕಡೆಗೆ ಎಂಎಲ್‌ಎ ಅಭ್ಯರ್ಥಿಗಳು ಇಲ್ಲ. ಈ ಬಾರಿ ಜೆಡಿಎಸ್‌ಗೆ ಬಹುಮತ ಸಿಗುವ ನಿರೀಕ್ಷೆ ಇದೆ ಎಂದ ಇಬ್ರಾಹಿಂ ಅಭಪ್ರಾಯ ವ್ಯಕ್ತಪಡಿಸಿದರು.

RELATED ARTICLES

Related Articles

TRENDING ARTICLES