Saturday, May 18, 2024

ಮಾರ್ಯದೆಗೆ ಅಂಜಿ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ

ರಾಮನಗರ : ಮಾರ್ಯದೆಗೆ ಅಂಜಿ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಂಚುಗಲ್​ ಬಂಡೆಮಠದ ಬಸವಲಿಂಗ ಸ್ವಾಮೀಜಿ(45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ಪುಟಗಳ ಡೆತ್‌ ನೋಟ್ ಬರೆದಿಟ್ಟು ಮಠದ ತಮ್ಮ ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಡೆತ್‌ ನೋಟ್​ನಲ್ಲಿ ಕೆಲವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ಯಾರ ಸಹಾಯವೂ ಇರಲಿಲ್ಲ. ಕೆಲವರಿಂದ ಬೆದರಿಕೆ ಕರೆಗಳು ಸಹ ಬಂದಿವೆ ಎಂದು ಉಲ್ಲೇಖಿಸಿದ್ದಾರೆ. ಮಾಗಡಿ ತಾಲೂಕಿನಲ್ಲೇ ದೊಡ್ಡ ಮಠ ಎಂಬ ಪ್ರಖ್ಯಾತಿ ಪಡೆದಿರುವ ಕಂಚುಗಲ್​ ಬಂಡೆಮಠದ ಆವರಣದಲ್ಲಿ ಶಾಲಾ ಕಾಲೇಜುಗಳಿವೆ. 50ಕೋಟಿಗೂ ಹೆಚ್ಚು ಮೌಲ್ಯ ಹೊಂದಿರುವ ಈ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮಠ ತಾಜ್ಯ ವಸ್ತು ವಿಲೇವಾರಿ ಘಟಕಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಅನೇಕ ಉತ್ತಮ ಕಾರ್ಯಕ್ರಮಗಳನ್ನು ಮಾಡಿ ಸಮಾಜಕ್ಕೆ ಮಾದರಿ ಮಠವಾಗಿಯೂ ಇದು ಬೆಳೆದಿದೆ.

ಕೆಲ ದಿನಗಳಿಂದ ಸ್ವಾಮೀಜಿಗಳ ವಿರುದ್ಧ ಕೇಳಿ ಬಂದ ಆರೋಪಕ್ಕೆ ಅಂಜಿ ಸ್ವಾಮೀಜಿ ಪ್ರಾಣ ತ್ಯಾಗ ಮಾಡಿದ್ದಾರೆ. ಇನ್ನು ಡೆತ್ ನೋಟ್​ನಲ್ಲಿರುವ ಕೆಲವು ಮಾಹಿತಿಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಕೆಲ ವೈಯಕ್ತಿಕ ಕಾರಣಗಳಿಂದ ಬೇಸತ್ತು ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ. ಕುದೂರು ಪೊಲೀಸ್‌ ಇನ್ಸ್ ಪೆಕ್ಟರ್ ಎಪಿ.ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ರು. ಸಾವಿರಾರು ಮಂದಿ ಭಕ್ತರು ಮಠದ ಬಳಿ ಜಮಾಯಿಸಿದ್ದಾರೆ.

RELATED ARTICLES

Related Articles

TRENDING ARTICLES