Wednesday, January 22, 2025

ನಾಳೆ ಅಧಿಕಾರ ಸ್ವೀಕರಿಸಲಿರುವ ಮಲ್ಲಿಕಾರ್ಜುನ ಖರ್ಗೆ, ಭೇಟಿಯಾಗಿ ಶುಭ ಹಾರೈಸಿದ ಸಿದ್ದರಾಮಯ್ಯ

ನವದೆಹಲಿ; ಎಐಸಿಸಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಾಜ್ಯ ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ್​ ಖರ್ಗೆ ಅವರನ್ನ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿದ್ದಾರೆ.

ರಾಷ್ಟ್ರೀಯ ಕಾಂಗ್ರೆಸ್​ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ನಾಳೆ ಮಲ್ಲಿಕಾರ್ಜುನ್​ ಖರ್ಗೆ ಅವರು ಅಧಿಕಾರ ಸ್ವೀಕರಿಸಲಿದ್ದು, ನವದೆಹಲಿಯಲ್ಲಿಂದು ಸಿದ್ದರಾಮಯ್ಯ ಅವರು ಖರ್ಗೆ ಅವರನ್ನ ಭೇಟಿಯಾಗಿ ಶುಭ ಹಾರೈಸಿದರು.

ಇನ್ನು ಮಲ್ಲಿಕಾರ್ಜುನ ಖರ್ಗೆ ಅವರ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಕರ್ನಾಟಕದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ನಾಯಕರು ಸಾಕ್ಷಿಯಾಗಲಿದ್ದಾರೆ.

ಎಐಸಿಸಿ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು 7897 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ, ಪ್ರತಿಸ್ಪರ್ಧಿ ಕಾಂಗ್ರೆಸ್​ ನಾಯಕ ಶಶಿ ತರೂರ್ ಅವರ 1072 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು.

RELATED ARTICLES

Related Articles

TRENDING ARTICLES