Sunday, November 24, 2024

ಚುಮು ಚುಮು ಚಳಿಗೆ ರಾಜಧಾನಿ ಥಂಡಾ

ಬೆಂಗಳೂರು : ರಾಜ್ಯದಲ್ಲಿ ಮಳೆ ಅಬ್ಬರದ ಬಳಿಕ ಈಗ ಚಳಿ ಸರದಿ ಆರಂಭವಾಗಿದ್ದು, ಮಳೆಯ ಅಬ್ಬರದ ನಂತರ ಚಳಿಯ ಎಫೆಕ್ಟ್ ಭಾರೀ ಜೋರಾಗಿದೆ.

ನಗರದಲ್ಲಿ ಕಳೆದ ಹತ್ತು ವರ್ಷದಲ್ಲಿ ಅಕ್ಟೋಬರ್‌ ತಿಂಗಳಲ್ಲಿ ಕನಿಷ್ಠ ತಾಪಮಾನ ದಾಖಲಾಗಿದ್ದು, ಬೆಂಗಳೂರಿನಲ್ಲಿ ವಾಡಿಕೆಗಿಂತ 3.9 ಡಿಗ್ರಿ ಸೆಲ್ಸಿಯಸ್‌ ಕಡಿಮೆ ತಾಪಮಾನ ದಾಖಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 15.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಇನ್ನು, ಕಳೆದ 10 ವರ್ಷಗಳ ಅವಧಿಯಲ್ಲಿ 2018ರ ಅಕ್ಟೋಬರ್‌ 30ರಂದು 16.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. 1974ರ ಅಕ್ಟೋಬರ್‌ 31 ರಂದು 13.2 ಡಿಗ್ರಿ ಸೆಲ್ಸಿಯಸ್‌ ವರದಿ ಆಗಿದ್ದು ಈವರೆಗಿನ ಕನಿಷ್ಠ ತಾಪಮಾನವಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಇಳಿಕೆ ಕಂಡಿದೆ.

ಅದಲ್ಲದೇ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಮಂಡ್ಯ, ಮಡಿಕೇರಿ, ಮೈಸೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನದಲ್ಲಿ ತುಸು ಹೆಚ್ಚಳವಾಗಿದ್ದು, ರಾಜ್ಯದ ಶೇ.73ರಷ್ಟುಭೂ ಭಾಗದಲ್ಲಿ 12 ಡಿಗ್ರಿ ಸೆಲ್ಸಿಯಸ್‌ನಿಂದ 16 ಡಿಗ್ರಿ ಸೆಲ್ಸಿಯಸ್‌ ತನಕ ಕನಿಷ್ಠ ತಾಪಮಾನ ದಾಖಲಾಗಿದೆ.

RELATED ARTICLES

Related Articles

TRENDING ARTICLES