Monday, December 23, 2024

ಇಂದಿನಿಂದ AICCಗೆ ಮಲ್ಲಿಕಾರ್ಜುನ ಖರ್ಗೆ ಸಾರಥಿ

ನವದೆಹಲಿ : AICC ನೂತನ ಅಧ್ಯಕ್ಷರ ಪದಗ್ರಹಣಕ್ಕೆ ಕ್ಷಣಗಣನೆ ಆರಂಭವಾಗಲಿದ್ದು, ಸೋನಿಯಾ ಗಾಂಧಿ ಸಮ್ಮುಖದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಬೆಳಗ್ಗೆ 10:30ಕ್ಕೆ ಪದಗ್ರಹಣ ಕಾರ್ಯಕ್ರಮ ಜರುಗಲಿದ್ದು, ಪದಗ್ರಹಣದಲ್ಲಿ ಕಾಂಗ್ರೆಸ್​​ ನಾಯಕರು ಭಾಗಿಯಾಗಲಿದ್ದಾರೆ. ರಾಹುಲ್ ಸೇರಿ ಹಲವು ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ನಿನ್ನೆಯೇ ದೆಹಲಿಗೆ ತೆರಳಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸೇರಿ ಹಲವರು ಇಂದು ದೆಹಲಿಗೆ ಪ್ರಯಾಣಿಸಲಿದ್ದಾರೆ.

ಖರ್ಗೆ ಮುಂದಿರುವ ಸವಾಲುಗಳೇನು..?

80 ವರ್ಷದ ಖರ್ಗೆಯವರಿಗೆ ಆರೋಗ್ಯ ಕಾಪಾಡಿಕೊಳ್ಳುವುದು, ಗಾಂಧಿ ಕುಟುಂಬದ ರಬ್ಬರ್ ಸ್ಟಾಂಪ್ ಎಂಬ ಹಣೆಪಟ್ಟಿಯಿಂದ ಹೊರಬರುವುದು, ಕಾಂಗ್ರೆಸ್​​​ ನಾಯಕರಲ್ಲಿನ ಅಸಮಾಧಾನ ಹೋಗಲಾಡಿಸುವುದು, ಹಲವು ರಾಜ್ಯಗಳಲ್ಲಿ ಪಕ್ಷದಲ್ಲಿನ ಮುನಿಸು ಬಗೆಹರಿಸುವುದು, ಯುವ ನಾಯಕರ ಮನಸ್ಥಿತಿಗೆ ಹೊಂದಿಕೊಂಡು ಹೋಗುವುದು, 2023ರಲ್ಲಿ ಎದುರಾಗಲಿರುವ 9 ರಾಜ್ಯಗಳ ವಿಧಾನಸಭೆ ಚುನಾವಣೆಗಳು, ದೇಶಾದ್ಯಂತ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು, ತವರು ರಾಜ್ಯ ಕರ್ನಾಟಕದಲ್ಲಿ ಭಿನ್ನಾಭಿಪ್ರಾಯ ಬಗೆಹರಿಸುವುದು ಇಷ್ಷು ಸವಾಲುಗಳನ್ನು ಎದುರಿಸಲಿದ್ದಾರೆ.

RELATED ARTICLES

Related Articles

TRENDING ARTICLES