Sunday, December 22, 2024

2023ಕ್ಕೆ ನಮ್ಮ ಪಕ್ಷವೇ ಅಧಿಕಾರಕ್ಕೆ ಬರೋದು‌ ನಿಶ್ಚಿತ : ಹೆಚ್​​ಡಿಕೆ

ಬೆಂಗಳೂರು : 2023ಕ್ಕೆ ನಮ್ಮ ಪಕ್ಷವೇ ಅಧಿಕಾರಕ್ಕೆ ಬರೋದು‌ ನಿಶ್ಚಿತ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್- ಬಿಜೆಪಿಯ ಪಾಪದ ಕೊಡ ತುಂಬಿದೆ. ಕಾಂಗ್ರೆಸ್ ನವರು ಯಾವ ಜೋಡೋ ಆದರೂ ಮಾಡಿಕೊಳ್ಳಲಿ. ಬಿಜೆಪಿಯವರು ಯಾವ ಸಂಕಲ್ಪ ಯಾತ್ರೆ ಆದರೂ ಮಾಡಿಕೊಳ್ಳಲಿ. 2023ಕ್ಕೆ ನಮ್ಮ ಪಕ್ಷವೇ ಅಧಿಕಾರಕ್ಕೆ ಬರೋದು‌ ನಿಶ್ಚಿತ ಎಂದರು.

ಇನ್ನು, ಜನರಿಂದ ಲೂಟಿ ಮಾಡಿದ ಹಣವನ್ನು ಹಂಚಲು ಬರ್ತಾರೆ. ಒಂದು ಮತಕ್ಕೆ 2000ಮತ್ತೆ ಕುಕ್ಕರ್ ಅಂತಾ ಬರ್ತಾರೆ. ಇದೆಲ್ಲದರ ಹಣ ರಾಜ್ಯದ ಜನರಿಂದ ಲೂಟಿ ಮಾಡಿರುವ ಹಣ. ಆದರೆ ನಾವು ಯಾರು ದುಡ್ಡು ಲೂಟಿ ಹೊಡೆದಿಲ್ಲ. ಭಾರತ್ ಜೋಡೋದಿಂದ ಜನರ ಸಮಸ್ಯೆಗಳ ಅರ್ಥ ಆಗಲ್ಲ. ಇವಾಗ ಏನೋ ಕಾಂಗ್ರೆಸ್ ನಾಯಕರು ಪಟ್ಟಿ ಮಾಡ್ತಾರಂತೆ. ಆದರೆ ಅವರಿಂದ ಏನು ಕೂಡ ಜನರ ಸಮಸ್ಯೆ ನಿವಾರಣೆ ಮಾಡೋಕೆ ಆಗಲ್ಲ ಎಂದು ಟಾಂಗ್ ನೀಡಿದ್ದಾರೆ.

RELATED ARTICLES

Related Articles

TRENDING ARTICLES