Monday, December 23, 2024

ದಕ್ಷಿಣ ಭಾರತದ ಮೊದಲ ವಂದೇ ಭಾರತ ಎಕ್ಸ್ ಪ್ರೆಸ್​​ಗೆ ಪಿಎಂ ಚಾಲನೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ನ. 11 ರಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಭೇಟಿ ನೀಡಲಿದ್ದು, ದಕ್ಷಿಣ ಭಾರತದಲ್ಲಿ ಮೊದಲ ಹಾಗೂ ಭಾರತದ ಐದನೇ ವಂದೇ ಭಾರತ ಎಕ್ಸ್ಪ್ರೆಸ್ ಗೆ ಚಾಲನೆ ನೀಡಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಗಾಂಧಿ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಪ್ರಧಾನಿ ಮೋದಿಯವರು ನವೆಂಬರ್ 11 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್ಎಎಲ್ ವಿಮಾನನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ನ ಉದ್ಘಾಟನೆಯನ್ನು ಮಾಡಲಿದ್ದಾರೆ.

ಅದೇ ಆವರಣದಲ್ಲಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಬೃಹತ್ ಸಭೆಯನ್ನು ಆಯೋಜಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮುಖ್ಯಅತಿಥಿಯಾಗಿ ಬರುವ ಬಗ್ಗೆ 3-4 ಗಣ್ಯರ ಜೊತೆ ಈಗಾಗಲೇ ಚರ್ಚಿಸಲಾಗಿದ್ದು, ಅವರ ಬರುವಿಕೆಯ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರು ಖಾತ್ರಿಗೊಳಿಸಲಿದ್ದಾರೆ ಎಂದರು.

RELATED ARTICLES

Related Articles

TRENDING ARTICLES