Monday, December 23, 2024

ಹಾಸನಾಂಬ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಪೂರ್ಣ

ಹಾಸನ : ವರ್ಷಕ್ಕೆ ಒಂದು ಬಾರಿ ಭಕ್ತರಿಗೆ ದರ್ಶನ ಕೊಡುವ ಹಾಸನಾಂಬೆಯ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ತಡರಾತ್ರಿವರೆಗೂ ಎಣಿಕೆ ಕಾರ್ಯ ಮಾಡಲಾಯಿತು.

ಇತಿಹಾಸ ಪ್ರಸಿದ್ದ ಹಾಸನಾಂಬೆ ದೇವಾಲಯದ ಬಾಗಿಲು ಅಕ್ಟೋಬರ್ 13ರಂದು ಅಕ್ಟೋಬರ್​ 27ರವರೆಗೂ ತೆರೆಯಲಾಯಿತು. ಈ ವೇಳೆ ಅತಿ ಹೆಚ್ಚು ಮೊತ್ತದ ದಾಖಲೆಯ ಆದಾಯ ಸಂಗ್ರಹವಾಗಿದೆ. ಈ ವರ್ಷ ಒಟ್ಟು ಹಾಸನಾಂಬೆ ಉತ್ಸವದಿಂದ 3 ಕೋಟಿ 69 ಲಕ್ಷದ 51 ಸಾವಿರದ 251 ರೂ ಆದಾಯ ಸಂಗ್ರಹವಾಗಿದೆ.

ಭಕ್ತರಿಂದ ಕಾಣಿಕೆ ರೂಪದಲ್ಲಿ 1 ಕೋಟಿ 88 ಲಕ್ಷದ 40 ಸಾವಿರದ 935 ರೂ ಸಂಗ್ರಹವಾದರೆ, ವಿಶೇಷ ದರ್ಶನದ ಪಾಸ್ ಮಾರಾಟದಿಂದಲೂ 1 ಕೋಟಿ 48 ಲಕ್ಷದ,27 ಸಾವಿರದ 600 ರೂ ಸಂಗ್ರಹವಾಗಿದೆ. ಜೊತೆಗೆ ಲಡ್ಡು ಪ್ರಸಾದ ಮಾರಾಟ ದಿಂದ 32 ಲಕ್ಷದ 82 ಸಾವಿರದ 716 ರೂ ಆದಾಯ ಬಂದರೆ ಎಲ್ಲಾ ಮೂಲಗಳೂ ಸೇರಿ ಒಟ್ಟು 3,69,51,251 ರೂ ಸಂಗ್ರಹವಾಗಿದೆ.

ಇನ್ನು, ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ಹಾಸನಾಂಬೆಯ ದರ್ಶನ ಕಲ್ಪಿಸಲಾಗುತ್ತದೆ. ಅರ್ಚಕರು ಗರ್ಭಗುಡಿ ಬಾಗಿಲಿಗೆ ಮಹಾ ಮಂಗಳಾರತಿ ನೆರವೇರಿಸಿದ ಬಳಿಕ ಅಕ್ಟೋಬರ್ 13ರಂದು ಹಾಸನಾಂಬೆ ಭಕ್ತರಿಗೆ ದರ್ಶನ ನೀಡಿದ್ದಳು. ಸತತ ಒಂದು ಗಂಟೆ ಕಾಲ ಗರ್ಭಗುಡಿ ಬಾಗಿಲ ಸಮೀಪ ಪೂಜೆ ಮಾಡಲಾಯಿತು. ಒಟ್ಟು 15 ದಿನ ಸಾರ್ವಜನಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿತ್ತು.

RELATED ARTICLES

Related Articles

TRENDING ARTICLES