Wednesday, January 22, 2025

ನಂದೀಶ್​ರದ್ದು ಸಾವಲ್ಲ..ಅದು ಕೊಲೆ..!

ಅಮಾನತುಗೊಂಡಿದ್ದ ಪೊಲೀಸ್ ಇನ್ಸ್ಪೆಕ್ಟರ್ ನಂದೀಶ್ ಸಾವು, ಹೃದಯಾಘಾತದಿಂದ ಅಲ್ಲ ಬದಲಾಗಿ ಇದೊಂದು ಕೊಲೆ ಎಂದು ಮಾಜಿ‌ ಸಿಎಂ ಎಚ್.ಡಿ ಕುಮಾರಸ್ವಾಮಿ‌ ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಈಗ ಸರ್ಕಾರವೇ ಸತ್ಯ ಹೇಳಿದೆ! ಸದ್ಯ, ಸಾವಿನಲ್ಲೂ ಸತ್ಯ ಹೇಳುವ ಧೈರ್ಯವನ್ನು ಸರ್ಕಾರ ಮಾಡಿದೆ.

ಬೊಮ್ಮಾಯಿ ಸಂಪುಟದ ಸಚಿವರೇ ವಿಷಯ ಬಹಿರಂಗಪಡಿಸಿದ್ದಾರೆ. ಸಚಿವ ಎಂ.ಟಿ.ಬಿ. ನಾಗರಾಜ್ ಅವರ ಹೇಳಿಕೆಯು ಈ ಸರ್ಕಾರದ ಕಾಸಿಗಾಗಿ ಪೋಸ್ಟಿಂಗ್ ದಂಧೆಗೆ ಹಿಡಿದ ಕನ್ನಡಿ ಎಂದು ಪ್ರತಿಕ್ರಿಯಿಸಿದ್ದಾರೆ. ಸಚಿವರೇ ಹೇಳಿದಂತೆ 70-80 ಲಕ್ಷಗಳನ್ನು ನಂದೀಶ್ ಅವರು ಯಾರಿಗೆ ಕೊಟ್ಟರು? ಇದರಲ್ಲಿ ಅವರ ಮೇಲಿನ ಉನ್ನತ ಅಧಿಕಾರಿಗಳು, ಗೃಹ ಸಚಿವರು ಮತ್ತು ಮುಖ್ಯಮಂತ್ರಿಗೆ ಪರ್ಸಂಟೇಜ್ ಹೋಗಿದೆಯಾ? ಅಥವಾ ಕಾಣದ ರಿಮೋಟ್ ಯಾವುದಾದರೂ ಇದೆಯಾ? ಸಚಿವರಂತೆ ನೀವೂ ಸತ್ಯ ಹೇಳಿ ಸಿ.ಎಂ. ಸಾಹೇಬರೇ ಎಂದು ಟ್ವೀಟ್‌ ಮಾಡಿದ್ದಾರೆ.

ಸಂಘ ಸಂಸ್ಕಾರದ ಗೃಹ ಸಚಿವರು ಉತ್ತರ ನೀಡಲೇಬೇಕು. ಧಮ್ಮಿದ್ರೆ, ತಾಕತ್ತಿದ್ರೆ ಎನ್ನುವ ಮುಖ್ಯಮಂತ್ರಿ ಅವರು ಈ ಬಗ್ಗೆ ಮೌನ ಮುರಿಯುವ ತಾಕತ್ತು ತೋರಬೇಕು ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES