Wednesday, January 22, 2025

ಕರ್ನಾಟಕ ರತ್ನ ಪ್ರಶಸ್ತಿ ಸಮಾರಂಭಕ್ಕೆ ರಜನಿಕಾಂತ್​​ ಆಗಮನ ಕನ್ಫರ್ಮ್​​

ಬೆಂಗಳೂರು: ದಿವಂಗತ ಪುನೀತ್​ ರಾಜ್​ಕುಮಾರ್​ ಪರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಸ್ವೀಕರಿಸಲಿರುವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸೂಪರ್​ ಸ್ಟಾರ್​ ರಜನಿ ಕಾಂತ್​ ಆಗಮಿಸಲಿದ್ದಾರೆ.

ಕರ್ನಾಟಕ ರತ್ನ ಪ್ರಶಸ್ತಿ ಕಾರ್ಯಕ್ರಮಕ್ಕೆ ನಟ ರಜನಿಕಾಂತ್​ ಅವರನ್ನ ರಾಜ್ಯ ಸರ್ಕಾರ ಆಹ್ವಾನಿಸಿತ್ತು. ಈ ಬಗ್ಗೆ ಇಂದು ಸಿಎಂಗೆ ಪತ್ರ ಬೆರೆದು ರಜನಿಕಾಂತ್ ಅವರು ದೃಢಪಡಿಸಿದ್ದಾರೆ. ಇನ್ನು ಈ ಸಮಾರಂಭಕ್ಕೆ ಪುನೀತ್​ ಅವರ ಕುಟುಂಬಸ್ಥರಿಗೆ ಪ್ರಶಸ್ತಿ ನೀಡಲು ಉತ್ಸುಕನಾಗಿದ್ದೇನೆ ಎಂದಿದ್ದಾರೆ.

ಇನ್ನು ಕರ್ನಾಟಕ ಸರ್ಕಾರದ ಆಹ್ವಾನ ಮನ್ನಿಸಿ ಕಾರ್ಯಕ್ರಮಕ್ಕೆ ಬರುತ್ತಿದ್ದೇನೆ. ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದಕ್ಕೆ ರಜನಿ ಕಾಂತ್​ ಅಭಿನಂದನೆ ತಿಳಿಸಿದರು.

ಕರ್ನಾಟಕ ರತ್ನ ಪ್ರಶಸ್ತಿ ಸಮಾರಂಭ ನ.1ರಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯಲಿದೆ. ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ತೆಲುಗು ನಟ ಜೂನಿಯರ್​ ಎನ್​ಟಿಆರ್​ ಬರಲಿದ್ದಾರೆ.

RELATED ARTICLES

Related Articles

TRENDING ARTICLES