Monday, December 23, 2024

ಅಪ್ಪು​ ಮೌಲ್ಯ ಜೀವಂತವಾಗಿಟ್ಟ ಅಭಿಮಾನಿಗಳೇ ನನಗೆ ದಾರಿ; ಅಶ್ವಿನಿ ಪುನೀತ್​ ಪತ್ರ

ಬೆಂಗಳೂರು; ದಿವಂಗತ ನಟ ಪುನೀತ್​ ರಾಜ್​ಕುಮಾರ್​ ಅವರು ಮೃತಪಟ್ಟು ಇಂದಿಗೆ ಒಂದು ವರ್ಷ ಕಳೆದಿದೆ. ಹಲವು ಅಭಿಮಾನಿಗಳು ಇಲ್ಲಿವೆರಿಗೂ ಅಪ್ಪು ಅವರು ನಮ್ಮ ಜತೆ ಎಂಬುದನ್ನ ಅರಗಿಸಿಕೊಳ್ಳಲಾಗುತ್ತಿಲ್ಲ. ಅದೆ ರೀತಿ ರಾಜ್​ಕುಮಾರ್​ ಕುಟುಂಬಸ್ಥರಿಗೂ ಇಲ್ಲಿವರೆಗೂ ದುಃಖದಲ್ಲಿ ಇದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಪುನೀತ್​ ಪತ್ನಿ ಅಶ್ವೀನಿ ಪುನೀತ್​ ರಾಜ್​ಕುಮಾರ್​ ಅವರು ಅಭಿಮಾನಿಗಳಿಗಾಗಿ ಪತ್ರ ಬರೆದಿದ್ದಾರೆ. ಅಪ್ಪು ಅವರು ನಮ್ಮ ನೆನಪುಗಳಲ್ಲಿ ಮಾತ್ರವಲ್ಲದೇ, ನಮ್ಮ ಆಲೋಚನೆಗಳು ಹಾಗೂ ನಾವು ಮಾಡುವ ಸತ್ಕಾರ್ಯಗಳಲ್ಲಿಯೂ ನಮ್ಮ ನಡುವೆ ಸದಾ ಜೀವಂತವಾಗಿದ್ದಾರೆ ಎಂದು ನುಡಿದಿದ್ದಾರೆ.

ಇನ್ನು ಪುನೀತ್​ ಅವರ ಕನಸು ಮತ್ತು ಮೌಲ್ಯಗಳನ್ನು ಜೀವಂತವಾಗಿಡಲು ನೂರಾರು ಕುಟುಂಬ ಸದಸ್ಯರು ಅವರ ಸಾವಿರಾರು ಸ್ನೇಹಿತರು ಹಾಗೂ ಕೋಟ್ಯಾಂತರ ಅಭಿಮಾನಿಗಳಿಂದ ನಾನು ಪಡೆದ ಬೆಂಬಲದ ಶಕ್ತಿಯೇ ನನಗೆ ದಾರಿ ಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ.

ಅಪ್ಪು ಅವರ ಮೇಲೆ ನಿಮ್ಮೆಲ್ಲರಿಗೆ ಇರುವ ಪ್ರೀತಿ ಮತ್ತು ಗೌರವದಿಂದ ಸದಾ ಕಾಲ ಅವರನ್ನು ಜೀವಂತವಾಗಿರಿಸಿದ್ದಕ್ಕಾಗಿ ಎಲ್ಲರಿಗೂ ಅಭಿನಂದನೆಗಳು ಎಂದು ಅಶ್ವೀನಿ ಪುನೀತ್​ ರಾಜ್​ಕುಮಾರ್​ ಅವರು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES