Friday, November 22, 2024

24 ಗಂಟೆಗಳಲ್ಲಿ 5666 ಡೆಂಗ್ಯೂ ಪ್ರಕರಣ ಪತ್ತೆ

ಉತ್ತರ ಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ನೂರಾರು ಡೆಂಗ್ಯೂ ರೋಗಿಗಳು ಏಕಾಏಕಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 5666 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ.

ಇದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಸೊಳ್ಳೆ ಕಚ್ಚುವುದರಿಂದ ಬರುವ ಈ ಕಾಯಿಲೆ ಮನುಷ್ಯನನ್ನು ಹೆಚ್ಚು ಬಾದಿಸುತ್ತದೆ. ಹೀಗಾಗಿ ಸೊಳ್ಳೆಗಳ ನಾಶಕ್ಕೆ ಸ್ಥಳೀಯ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ಉತ್ತರಪ್ರದೇಶದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದೆ. ಹೀಗಾಗಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗುರುವಾರ ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.  ಡೆಂಗ್ಯೂ ಹರಡುವುದನ್ನು ತಡೆಯಲು ಆಸ್ಪತ್ರೆಗಳಲ್ಲಿ ಹಾಸಿಗೆಗಳು ಮತ್ತು ಔಷಧಿಗಳಂತಹ ಅಗತ್ಯ ಸೌಲಭ್ಯಗಳನ್ನು ತ್ವರಿತವಾಗಿ ನೀಡಲು ಸೂಚನೆ ನೀಡಿದರು.

RELATED ARTICLES

Related Articles

TRENDING ARTICLES