ಕಲಬುರಗಿ : ಕಾಂಗ್ರೆಸ್‌ನ ಭಾರತ್ ಜೋಡೊ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ಬೃಹತ್ ಒಬಿಸಿ ವಿರಾಟ್ ಸಮಾವೇಶವನ್ನು ಹಮ್ಮಿಕೊಂಡಿದ್ದು, ಮಧ್ಯಪ್ರದೇಶದ ಸಿಎಂ ಶಿವರಾಜ್‌ಸಿಂಗ್ ಚವ್ಹಾಣ್ ಮತ್ತು ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಬೊಮ್ಮಾಯಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ತಾಕತ್ತಿದ್ದರೆ ಧಮ್ ಇದ್ರೆ ನಮ್ಮ ವಿಜಯ ಪತಾಕೆಯನ್ನು ತಡೆಯಿರಿ ಅಂತಾ ಸವಾಲು ಹಾಕಿದರು. ನಾನು ಕಲಬುರಗಿಗೆ ಖಾಲಿ ಕೈನಿಂದ ಬಂದಿಲ್ಲ. ಬದಲಿಗೆ ತಳವಾರ್ ಮತ್ತು ಪರಿವಾರ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸಿದ ಆದೇಶ ಪ್ರತಿ ತಂದಿದ್ದೇನೆ ಅಂತಾ ಪ್ರತಿಯನ್ನು ಪ್ರದರ್ಶಿಸಿದರು. BSY ಕೂಡ ಕಾಂಗ್ರೆಸ್ ವಿರುದ್ಧ ಗುಡುಗಿದರು.
ಇನ್ನೂ ಸಮಾವೇಶದಲ್ಲಿ ಲಕ್ಷಕ್ಕೂ ಅಧಿಕ ಜನ ಆಗಮಿಸಿದ್ದು, ಒಬಿಸಿ ಸಮಾವೇಶದಲ್ಲಿ ಅನೇಕ ಹಿಂದುಳಿದ ವರ್ಗಗಳ ನಾಯಕರು ಭಾಗವಹಿಸಿದ್ದರು. MP CM ಚವ್ಹಾಣ್ ಮಾತನಾಡಿ, ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು. ನಾನು ಚಿಂಚೋಳಿ ಉಪಚುನಾವಣೆ ಪ್ರಚಾರದಲ್ಲಿ ಭಾಗವಿಸಿದ್ದಕ್ಕೆ ಮಧ್ಯಪ್ರದೇಶದಲ್ಲಿ ಮೂರನೇ ಬಾರಿ ಸಿಎಂ ಆಗಿದ್ದೇನೆ ಎಂದರು. ಇನ್ನೂ 1947 ರಲ್ಲಿ ಭಾರತವನ್ನ ತುಂಡು ಮಾಡಿದ್ದ ಇದೇ ಕಾಂಗ್ರೆಸ್ ಇಂದು ಭಾರತ್ ಜೋಡೊ ಯಾತ್ರೆ ಮಾಡುತ್ತಿದೆ ಅಂತಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಒಟ್ಟಿನಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವಾಗಲೇ ಕೇಸರಿ ಬ್ರಿಗೇಡ್ ಹಿಂದುಳಿದ ವರ್ಗಗಳ ಮತ ಸೆಳೆಯಲು ಕಲ್ಯಾಣ ಕರ್ನಾಟಕ ಭಾಗದಿಂದ ಪಾಂಚಜನ್ಯ ಮೊಳಗಿಸಿದ್ದು, ಚುನಾವಣೆಯಲ್ಲಿ ಎಷ್ಟರ ಮಟ್ಟಿಗೆ ವರ್ಕೌಟ್ ಆಗುತ್ತೆ ಅನ್ನೋದನ್ನು ಕಾದು ನೋಡಬೇಕಿದೆ.
ಅನಿಲ್‌ಸ್ವಾಮಿ ಪವರ್ ಟಿವಿ ಕಲಬುರಗಿ