ಬೆಂಗಳೂರು; ಪುಲ್ವಾಮ ಭಯೋತ್ಪಾದಕ ದಾಳಿಯನ್ನು ಸಮರ್ಥಿಸಿಕೊಂಡ ಆರೋಪಿಗೆ ಎನ್ಐಎ ವಿಶೇಷ ನ್ಯಾಯಾಲಯ ಐದು ವರ್ಷ ಸಜೆ ಹಾಗೂ 10 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ.
ಭಯೋತ್ಪಾದಕ ಕೃತ್ಯಕ್ಕೆ ಬೆಂಬಲಿಸಿದ್ದ ಆರೋಪದ ಅಡಿ ಫೈಜ್ ರಶೀದ್ ನನ್ನ ಸಿಸಿಬಿ ಪೊಲೀಸರು ಬಂಧನ ಮಾಡಿದ್ದರು. ಪ್ರತಿಷ್ಟಿತ ಮೂರನೇ ಸೆಮಿಸ್ಟರ್ ಎಂಜಿನಿಯರ್ ವಿದ್ಯಾರ್ಥಿಯಾಗಿದ್ದ ಆರೋಪಿ 20 ವರ್ಷದ ಫೈಜ್ ರಶೀದ್ಗೆ ಐದು ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡವನ್ನ ಎನ್ಐಎ ವಿಶೇಷ ನ್ಯಾಯಾಲಯ ವಿಧಿಸಿದೆ.
ಇಡೀ ದೇಶ ಪುಲ್ವಾಮ ದಾಳಿಯಿಂದ ಶೋಕದಲ್ಲಿದ್ದ ವೇಳೆಯಲ್ಲಿ ಪೈಜ್ ರಶೀದ್ ಸೋಷಿಯಲ್ ಮೀಡಿಯಾದಲ್ಲಿ ಭಯೋತ್ಪಾದಕರಿಗೆ ಸಪೋರ್ಟ್ ಮಾಡಿ ಪೋಸ್ಟ್ ಮಾಡಿದ್ದನು.
ಫೆಬ್ರವರಿ 14, 2019 ಮಧ್ಯಾಹ್ನ 3 ಗಂಟೆ ಸಮಯ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೆಥ್ಪೊರ ಬಳಿಯ ಅವಾಂತಿಪೋರಾ ಬಳಿ ಸಿಆರ್‌ಪಿಎಫ್ ಯೋಧರನ್ನು ಕರೆದುಕೊಂಡು 78 ಸೇನಾ ವಾಹನಗಳು ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಾಲಿನಲ್ಲಿ ಸಾಗುತ್ತಿದ್ದವು. ಈ ವೇಳೆ 350 ಕೆಜಿ ಸ್ಫೋಟಕಗಳನ್ನು ಹೊತ್ತ ಮಹೀಂದ್ರಾ ಸ್ಕಾರ್ಪಿಯೋ ಎಸ್‌ಯುಪಿಯೊಂದು ನೇರವಾಗಿ ಸೇನಾ ವಾಹನವೊಂದಕ್ಕೆ ಡಿಕ್ಕಿ ಹೊಡೆದು 40 ಯೋಧರು ಹುತಾತ್ಮರಾಗಿದ್ದರು.