Monday, December 23, 2024

‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ: ಪುನೀತ್ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಆಹ್ವಾನ

ಬೆಂಗಳೂರು; ರಾಜ್ಯ ಸರ್ಕಾರ ಘೋಷಣೆ ಮಾಡಿದ ಕರ್ನಾಟಕ ರತ್ನ ಪ್ರಶಸ್ತಿ ಸಮಾರಂಭ ನಾಳೆ ಪುನೀತ್​ ಕುಟುಂಬಕ್ಕೆ ಪ್ರಶಸ್ತಿ ಪ್ರಧಾನ ಮಾಡಲಿದ್ದು ರಾಜ್ಯಸ ರ್ಕಾರದಿಂದ ಆಹ್ವಾನಿಸಲಾಯಿತು.

ದಿವಂಗತ​​ ಪುನೀತ್ ರಾಜ್​ಕುಮಾರ್​ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನ ಇತ್ತೀಚಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ಈ ಪ್ರಶಸ್ತಿ ಸಮಾರಂಭ ನಾಳೆ(ನ.1) ಸಂಜೆ 4 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದೆ.

ಹೀಗಾಗಿ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನ ದಿ.ಪುನೀತ್​ ಬದಲಿಗೆ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದ್ದು, ಹೀಗಾಗಿ ರಾಜ್​ಕುಮಾರ್​ ಇಡೀ ಕುಟುಂಬಕ್ಕೆ ಆಹ್ವಾನ ನೀಡಲಾಯಿತು.

ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ತಮಿಳು ನಟ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ತೆಲುಗು ನಟ ಜ್ಯೂನಿಯರ್ ಎನ್.ಟಿ.ಆರ್ ಹಾಗೂ ಸುಧಾಮೂರ್ತಿ ಆಗಮಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

RELATED ARTICLES

Related Articles

TRENDING ARTICLES