Wednesday, December 18, 2024

ವಿಜಯಪುರ ಪಾಲಿಕೆಯಲ್ಲಿ ಬಿಜೆಪಿ ಮೇಲುಗೈ; ಯತ್ನಾಳ್​ಗೆ ಅಭಿನಂದನೆ ತಿಳಿಸಿದ ಸಿಎಂ

ವಿಜಯಪುರ; ವಿಜಯಪುರ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ ಹಿನ್ನಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಭಿನಂದನೆ ತಿಳಿಸಿದ್ದಾರೆ.

ವಿಜಯಪುರ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಒಟ್ಟು 35 ಸ್ಥಾನಗಳಲ್ಲಿ 17 ಸ್ಥಾನಗಳನ್ನು ಬಿಜೆಪಿ ಗೆಲ್ಲುವ ಮೂಲಕ ನಮ್ಮ ಪಕ್ಷ ಅಭೂತಪೂರ್ವ ವಿಜಯ ಪತಾಕೆ ಹಾರಿಸಿದೆ. ಪಕ್ಷದ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಸ್ಥಳೀಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೂ ಸಿಎಂ ಅಭಿನಂದನೆ ಹೇಳಿದರು.

ಇಂದು ನಡೆದ ವಿಜಯಪುರ ಮಹಾನಗರ ಪಾಲಿಕೆಯ ಚುನಾವಣೆಯ ಫಲಿತಾಂಶದಲ್ಲಿ 35 ಸದಸ್ಯ ಬಲದ ಪಾಲಿಕೆಯಲ್ಲಿ ಬಿಜೆಪಿ-17 ವಾರ್ಡ್‌ನಲ್ಲಿ, ಕಾಂಗ್ರೆಸ್-10 ವಾರ್ಡ್​ನಲ್ಲಿ, ಎಐಎಂಐಎಂ-02 ಸ್ಥಾನಗಳಲ್ಲಿ ಹಾಗೂ ಪಕ್ಷೇತರರು-05 ಸ್ಥಾನಗಳಲ್ಲಿ ಹಾಗೂ ಜೆಡಿಎಸ್ ಒಂದೇ ಸ್ಥಾನದಲ್ಲಿ ಗೆಲುವು ಸಾಧಿಸಿದೆ.

RELATED ARTICLES

Related Articles

TRENDING ARTICLES