Saturday, April 27, 2024

ನ್ಯೂಜಿಲೆಂಡ್​, ಬಾಂಗ್ಲಾದೇಶ ವಿರುದ್ಧ T-20, ಏಕದಿನ, ಟೆಸ್ಟ್​ಗೆ ಭಾರತ ತಂಡ ಪ್ರಕಟ

ನವದೆಹಲಿ: ಮುಂಬರುವ ನ್ಯೂಜಿಲೆಂಡ್ ಪ್ರವಾಸಕ್ಕೆ ಭಾರತ ತಂಡವನ್ನು ಬಿಸಿಸಿಐ ಸೋಮವಾರ ಪ್ರಕಟಿಸಿದೆ. ಪ್ರವಾಸವು ನವೆಂಬರ್‌ 18 ರಿಂದ ವೆಲ್ಲಿಂಗ್‌ಟನ್‌ನಲ್ಲಿ ಪ್ರಾರಂಭವಾಗುವ 3 ಟಿ-20 ಪಂದ್ಯಗಳನ್ನು ಒಳಗೊಂಡಿದೆ. ಬಳಿಕ ನ್ಯೂಜಿಲೆಂಡ್​ ವಿರುದ್ಧ ಭಾರತ ಏಕದಿನ ಪಂದ್ಯಗಳ ಆರಂಭವಾಗಲಿವೆ. ನವೆಂಬರ್ 30 ರಂದು ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್‌ನಲ್ಲಿ ಅಂತಿಮ ಏಕದಿನ ಪಂದ್ಯದೊಂದಿಗೆ ಸರಣಿಯು ಕೊನೆಗೊಳ್ಳುತ್ತದೆ.

ಬಳಿಕ ಭಾರತ ಡಿಸೆಂಬರ್​ 4 ರಿಂದ ಬಾಂಗ್ಲಾದೇಶ ವಿರುದ್ಧ 3 ಏದಿನ ಪಂದ್ಯ ಆಗಲಿದ್ದು, ಡಿಸೆಂಬರ್​ 14 ರಿಂದ ಭಾರತ ಎರಡು ಟೆಸ್ಟ್​ ಪಂದ್ಯ ಆಡಲಿದೆ. ಈ ಪಂದ್ಯಕ್ಕೆ ಇಂದು ಬಿಸಿಸಿಐ ಭಾರತ ತಂಡವನ್ನ ಪ್ರಕಟಿಸಿದೆ.

ನ್ಯೂಜಿಲೆಂಡ್​ ವಿರುದ್ಧ ಏಕದಿನ ಪಂದ್ಯಕ್ಕೆ ಭಾರತ ತಂಡ

ಶಿಖರ್ ಧವನ್ (ನಾಯಕ), ರಿಷಬ್ ಪಂತ್ (ಉಪನಾಯಕ, ವಿಕೆಟ್​ ಕೀಪರ್), ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್), ಡಬ್ಲ್ಯು ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಶ್ದೀಪ್ ಸಿಂಗ್ , ದೀಪಕ್ ಚಾಹರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.

ನ್ಯೂಜಿಲೆಂಡ್​​ ವಿರುದ್ಧ T-20 ಪಂದ್ಯಕ್ಕೆ ಭಾರತ ತಂಡ

ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್ (ಉಪನಾಯಕ, ವಿಕೆಟ್​ ಕೀಪರ್), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ಕೀಪರ್​​), ಡಬ್ಲ್ಯು ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷ್‌ದೀಪ್ ಸಿಂಗ್, ಹರ್ಷಲ್ ಪಟೇಲ್ , ಮೊಹಮ್ಮದ್. ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.

ಬಾಂಗ್ಲಾದೇಶ ವಿರುದ್ಧ ಟೆಸ್ಟ್‌ಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಕೀಪರ್​​), ಕೆಎಸ್ ಭರತ್ (ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್ , ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.

ಬಾಂಗ್ಲಾದೇಶ ವಿರುದ್ಧ ಏಕದಿನ ಪಂದ್ಯಕ್ಕೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಬ್ ಪಂತ್ (ವಿಕೆಟ್​ ಕೀಪರ್), ಇಶಾನ್ ಕಿಶನ್ (ವಿಕೆಟ್​ ಕೀಪರ್​), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಡಬ್ಲ್ಯು ಸುಂದರ್, ಶಾರ್ದೂಲ್ ಠಾಕೂರ್ , ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್, ಯಶ್ ದಯಾಳ್

RELATED ARTICLES

Related Articles

TRENDING ARTICLES