Monday, December 23, 2024

ಮೈಸೂರು ದಸರಾಗೆ 26.54 ಕೋಟಿ ರೂ ಖರ್ಚು; ಸಚಿವ ಎಸ್​.ಟಿ ಸೋಮಶೇಖರ್​

ಮೈಸೂರು: ಇತ್ತೀಚಿಗೆ ನಡೆದ ಅದ್ಧೂರಿ ಮೈಸೂರು ದಸರಾ ಹಬ್ಬಕ್ಕೆ 26.54 ಕೋಟಿ ರೂ ಖರ್ಚು ಮಾಡಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ ಸೋಮಶೇಖರ್​ ಹೇಳಿದ್ದಾರೆ.

ಕೊರೊನಾ ಹಿನ್ನಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮೈಸೂರು ದಸರಾವನ್ನ ವಿಜೃಂಭಣೆಯಿಂದ ಆಚರಿಸದಿರಲು ಜಿಲ್ಲಾಡಳಿತ ನಿರ್ಧರಿಸಿತ್ತು. ಈ ವರ್ಷ ಅದ್ಧೂರಿಯಾಗಿ ಮೈಸೂರು ದಸರಾ ಆಚರಣೆ ಬಗ್ಗೆ ಇಂದು ಎಸ್​.ಟಿ ಸೋಮಶೇಖರ್​ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದಾರೆ.

ಸಾಂಸ್ಕೃತಿಕ ನಗರದಲ್ಲಿ ನಡೆದ ಅದ್ದೂರಿ ದಸರಾ ಮಹೋತ್ಸವಕ್ಕೆ 26.54 ಕೋಟಿ ರೂ ಖರ್ಚು ಮಾಡಲಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳಿಂದ ಆಚರಣೆಗೆ 31.8 ಕೋಟಿ ರೂ ಹಣ ಸಂಗ್ರಹವಾಗಿತ್ತು. ಇದರಲ್ಲಿ 26.54 ಕೋಟಿ ರೂ ಖರ್ಚು ಆಗಿ, ಒಟ್ಟು 2.34 ಕೋಟಿ ರೂ ಉಳಿತಾಯವಾಗಿದೆ ಎಂದರು.

RELATED ARTICLES

Related Articles

TRENDING ARTICLES