Friday, January 10, 2025

ಕಾಂಗ್ರೆಸ್​ ಪಕ್ಷಕ್ಕೆ ಗುಡ್​ ಬೈ; ನಾಳೆ ಬಿಜೆಪಿಗೆ ಸೇರ್ಪಡೆಯಾಗಲಿರುವ ಮಾಜಿ ಸಂಸದ ಮುದ್ದಹನುಮೇಗೌಡ

ಬೆಂಗಳೂರು: ಮಾಜಿ ಸಂಸದ ಎಸ್‌.ಪಿ ಮುದ್ದಹನುಮೇಗೌಡ ಅವರು ಕಾಂಗ್ರೆಸ್​ ಸದಸ್ಯತ್ವ ಸ್ಥಾನಕ್ಕೆ ಗುಡ್​ ಬೈ ಹೇಳಿದ್ದಾರೆ.

ನಾನು ಕಾಂಗ್ರೆಸ್​ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಇದನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಅವರು ಅಂಗೀಕರಿಸಬೇಕೆಂದು ನವೆಂಬರ್​ 1 ರಂದು ಅವರು ರಾಜೀನಾಮೆ ನೀಡಿದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಬರುವ 2023 ವಿಧಾನಸಭೆಗೆ ಕುಣಿಗಲ್​ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್​ ನಿಡೋ ಭರವಸೆ ಹಿನ್ನಲೆಯಲ್ಲಿ ನಾಳೆ(ನವೆಂಬರ್​ 3) ಬೆಳಿಗ್ಗೆ 9 ಗಂಟೆಗೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮುದ್ದಹನುಮೇಗೌಡ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಇನ್ನು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಉಪಸ್ಥಿತಿರಲಿರುವ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಸಮ್ಮುಖದಲ್ಲಿ ಮುದ್ದಹನುಮೇಗೌಡ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಈ ಮೊದಲು ಕಾಂಗ್ರೆಸ್‌ನಲ್ಲಿದ್ದ ಮುದ್ದಹನುಮೇಗೌಡ ಅವರು ನಂತರ ಜೆಡಿಎಸ್ ಸೇರಿದ್ದರು. ಬಳಿಕ ಮತ್ತೆ ಕಾಂಗ್ರೆಸ್‌ಗೆ ಮರಳಿದ್ದರು. ತುಮಕೂರು ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‌, ಜೆಡಿಎಸ್‌ಗೆ ಬಿಟ್ಟು ಕೊಟ್ಟಿದ್ದರಿಂದ ಮುನಿಸಿಕೊಂಡಿದ್ದರು.

RELATED ARTICLES

Related Articles

TRENDING ARTICLES