Wednesday, January 22, 2025

ಐಸಿಸಿ T-20 ಶ್ರೇಯಾಂಕದಲ್ಲಿ ಸೂರ್ಯಕುಮಾರ್​ ಯಾದವ್​ಗೆ​ ನಂ. 1 ಪಟ್ಟ

ನವದೆಹಲಿ; ಐಸಿಸಿ ಬಿಡುಗಡೆ ಮಾಡಿರುವ ನೂತನ ಟಿ-20 ಶ್ರೇಯಾಂಕದಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸಮನ್​ ಸೂರ್ಯಕುಮಾರ್ ಯಾದವ್ ನಂ.1 ಸ್ಥಾನವನ್ನು ಅಲಂಕರಿಸಿದ್ದಾರೆ.

ಟಿ-20 ವಿಶ್ವಕಪ್​ನಲ್ಲಿ ಸತತ ಎರಡು ಅರ್ಧಶತಕಗಳನ್ನು ಸಿಡಿಸಿದ ಸೂರ್ಯ ಈ ಹಿಂದೆ ಮೊದಲ ಸ್ಥಾನದಲ್ಲಿದ್ದ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಅವರನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಿದ್ದಾರೆ.

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 68 ರನ್ ಗಳಿಸಿದ್ದ ಸೂರ್ಯ ತಂಡದ ಪರ ಅತ್ಯಧಿಕ ರನ್ ಗಳಿಸಿದ ಆಟಗಾರನೆನಿಸಿಕೊಂಡಿದ್ದರು. ಇದಕ್ಕೂ ಮೊದಲು ನೆದರ್ಲೆಂಡ್ಸ್ ವಿರುದ್ಧ ಭಾರತ ಆಡಿದ ಎರಡನೇ ಪಂದ್ಯದಲ್ಲೂ ಅವರು ಅರ್ಧಶತಕ ಸಿಡಿಸಿದ್ದರು. ಸದ್ಯಕ್ಕೆ ವಿಶ್ವದ ಅತ್ಯುತ್ತಮ ಟಿ-20 ಬ್ಯಾಟರ್ ಎಂದು ಹೇಳಬಹುದಾದ ಸೂರ್ಯಕುಮಾರ್ ಯಾದವ್ ಬುಧವಾರ ಬಿಡುಗಡೆಯಾದ ಐಸಿಸಿ ಟಿ20 ರ್ಯಾಂಕಿಂಗ್‌ನಲ್ಲಿ ನಂ.1 ಸ್ಥಾನವನ್ನು ಅಲಂಕರಿಸಿದ್ದಾರೆ.

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್​ನಲ್ಲಿ ಅಬ್ಬರಿಸುತ್ತಿರುವ ಸೂರ್ಯ ಕುಮಾರ್​ ಯಾದವ್ ಪಂದ್ಯಾವಳಿಯಲ್ಲಿ ಇದುವರೆಗೆ ಆಡಿರುವ 3 ಪಂದ್ಯಗಳಲ್ಲಿ, 15, 51 ಮತ್ತು 68 ರನ್ ಕಲೆ ಹಾಕಿದ್ದಾರೆ.

RELATED ARTICLES

Related Articles

TRENDING ARTICLES