Wednesday, January 22, 2025

ಮಾಜಿ ಶಾಸಕ H.C ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಾಟ

ರಾಮನಗರ; ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟದ ಉದ್ಘಾಟನೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ‌ಕಾರ್ಯಕರ್ತರ ನಡುವೆ ಗಲಾಟೆಯಾದ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಕಾಮಸಾಗರ ಗ್ರಾಮದಲ್ಲಿ ನಡೆದಿದೆ.

ಇಂದು ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟದ ಉದ್ಘಾಟನೆ ಇತ್ತು. ಈ ವಿಚಾರಕ್ಕೆ ಜೆಡಿಎಸ್ ಹಾಗೂ ಕಾಂಗ್ರೆಸ್ ‌ಕಾರ್ಯಕರ್ತರ ನಡುವೆ ಗಲಾಟೆ ವಿಕೋಪಕ್ಕೆ ಹೋಗಿ ಮಾಜಿ ಶಾಸಕ ಹೆಚ್ ಸಿ ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಕಾರ್ಯಕ್ರಮವನ್ನ ಮೊದಲು ಉದ್ಘಾಟನೆ ಮಾಡಲು ಮಾಜಿ ಶಾಸಕ ಬಾಲಕೃಷ್ಣ ಬಂದಿದ್ದ‌ರು. ಇದಕ್ಕೆ  ಜೆಡಿಎಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಆಗ ಕಾಂಗ್ರೆಸ್​ ಕಾರ್ಯಕರ್ತರು ಪಟಾಕಿ ಸಿಡಿಸಿದ್ದು, ಎರಡು ಪಕ್ಷ ಕಾರ್ಯಕರ್ತರ ನಡುವೆ ಗಲಾಟೆಯಾಗಿದೆ.

ಈ ಗಲಾಟೆ ವಿಕೋಪಕ್ಕೆ ಹೋಗಿ ಕಾರ್ಯಕ್ರಮ ಮುಗಿಸಿ ಕಾಂಗ್ರೆಸ್​ನ ಮಾಜಿ ಶಾಸಕ ಬಾಲಕೃಷ್ಣ ವೇಳೆ ಕಾರಿನ ಮೇಲೆ ಜೆಡಿಎಸ್​ ಕಾರ್ಯಕರ್ತರು ಕಲ್ಲೆಸೆದಿದ್ದಾರೆ.

ಇನ್ನು ಶಿಷ್ಟಾಚಾರ ಪಾಲಿಸಿಲ್ಲ ಎಂದು ಜೆಡಿಎಸ್ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದು, ಶಾಸಕ ಮಂಜುನಾಥ್ ಅವರ ಹೆಸರು ಕೊನೆಯಲ್ಲಿ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಕೂದುರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES