Monday, November 4, 2024

ಗ್ರಾಮೀಣ ಭಾಗದಲ್ಲೂ ಉತ್ತಮ ವೈದ್ಯಕೀಯ ಸೌಲಭ್ಯ:ಸಚಿವ ಸುಧಾಕರ್

ಬೆಂಗಳೂರು: ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಸುಧಾಕರ್ ರವರು, ಹಲವು ಕೊರತೆಗಳ‌ ಮಧ್ಯೆಯೂ ನಾವು ಕೋವಿಡ್ ಅನ್ನು ಯಶಸ್ವಿಯಾಗಿ ಎದುರಿಸಿದೆವು.

ಕೋವಿಡ್ ಕಾರಣದಿಂದ ಮೆಡಿಕಲ್ ಕಾಲೇಜುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮುಂದಿನ ವರ್ಷ ಹೊಸ ಮೆಡಿಕಲ್ ಕಾಲೇಜುಗಳ ಸ್ಥಾಪನೆ ಆಗುತ್ತದೆ. ನಮ್ಮ ಆರೋಗ್ಯ ವ್ಯವಸ್ಥೆ ಈಗ ಉತ್ತಮ ಮಟ್ಟಕ್ಕೆ ಬಂದಿದೆ. ಆರೋಗ್ಯ ಸಿಬ್ಬಂದಿಯ ಪ್ರಮಾಣ ಹೆಚ್ಚಾಗಿದೆ.

ಕರ್ನಾಟಕದಲ್ಲಿ 800 ಜನರಿಗೆ 1 ವೈದ್ಯರು ಇದ್ದಾರೆ,  ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರು, ಉತ್ತಮ ವೈದ್ಯಕೀಯ ಸೌಲಭ್ಯ ಕೊರತೆ ಇದೆ.ಇದನ್ನು ನಾವು ಒಪ್ಪಿಕೊಳ್ಳಬೇಕಾಗಿದೆ.ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲೂ ಉತ್ತಮ ವೈದ್ಯಕೀಯ ಸೌಲಭ್ಯ ‌ನೀಡುವಲ್ಲಿ ಸರ್ಕಾರ ಕ್ರಮವಹಿಸುತ್ತದೆ.

RELATED ARTICLES

Related Articles

TRENDING ARTICLES