Friday, December 27, 2024

‘ಸಾವುಗೇಡಿ ಸರ್ಕಾರಕ್ಕೆ ನನ್ನ ಧಿಕ್ಕಾರವಿದೆ’ : ಹೆಚ್​ಡಿಕೆ

ತುಮಕೂರು: ಜಿಲ್ಲಾ ಆಸ್ಪತ್ರೆಯಲ್ಲಿ ಗರ್ಭಿಣಿಯನ್ನು ದಾಖಲಿಸದೆ ಅಮಾನುಷವಾಗಿ ವರ್ತಿಸಿ, ಆ ಗರ್ಭಿಣಿ ಸಾವಿಗೆ ಕಾರಣವಾಗಿದ್ದಕ್ಕೆ ಮಾಜಿ ಸಿಎಂ H.D.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್​ ಮಾಡಿರುವ ಅವರು, ಆರೋಗ್ಯ ಸಚಿವ ಸುಧಾಕರ್​​ ಅವರೇ ಸಾವು, ಕ್ರೌರ್ಯವನ್ನೇ ಸಂಭ್ರಮಿಸುವ ಸಾವುಗೇಡಿ ಸರ್ಕಾರದ ಆಡಳಿತದಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ಸಾವಿನಕೂಪಗಳನ್ನಾಗಿ ಪರಿವರ್ತನೆ ಮಾಡಿದ ಕೀರ್ತಿ ನಿಮ್ಮದು. ತುಮಕೂರು ಆಸ್ಪತ್ರೆ ಮತ್ತು ವೈದ್ಯೆಯ ದರ್ಪದಿಂದ ಆದ 3 ಅಮಾನುಷ ಸಾವುಗಳ ಬಗ್ಗೆ ನಿಮಗೆ ಕೊನೆಪಕ್ಷ ಪಶ್ಚಾತ್ತಾಪ, ಪಾಪಪ್ರಜ್ಞೆ ಬೇಡವೇ ಎಂದು ಪ್ರಶ್ನಿಸಿದ್ದಾರೆ.

ಡಾ.ಸುಧಾಕರ್‌ ಅವರೇ ನಾನು ಎತ್ತಿದ ಪ್ರಶ್ನೆ ಏನು? ನೀವು ಕೊಟ್ಟ ಉತ್ತರವೇನು? ಮನುಷ್ಯತ್ವ ಇದೆಯಾ ನಿಮಗೆ? ನಿಮ್ಮ ವೈಫಲ್ಯಗಳನ್ನು ಸಮರ್ಥಿಸಿಕೊಳ್ಳುತ್ತಿದ್ದೀರಿ ಎಂದರೆ, ಆ ಬಾಣಂತಿ, ಆಕೆಯ ಎರಡು ನವಜಾತ ಶಿಶುಗಳ ಧಾರುಣ ಸಾವನ್ನೂ ಸಂಭ್ರಮಿಸುತ್ತಿದ್ದೀರಿ ಎಂದೇ ಅರ್ಥ. ನಿಮ್ಮ ವಿಕೃತ ಮನಃಸ್ಥಿತಿಗೆ ನನ್ನ ಧಿಕ್ಕಾರವಿದೆ ಎಂದಿದ್ದಾರೆ.

RELATED ARTICLES

Related Articles

TRENDING ARTICLES