Monday, May 20, 2024

ಜಾಗತಿಕ ಬಂಡವಾಳ ಸಮಾವೇಶದಲ್ಲಿ 9,81,784 ಕೋಟಿ ರೂ. ಹೂಡಿಕೆ: ಸಚಿವ ನಿರಾಣಿ

ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.

ಇಂದು ಸುದ್ದಿಗೋಷ್ಟಿ ‌ನಡೆಸಿ ಮಾಹಿತಿ ನೀಡಿದ ಕೈಗಾರಿಕೆ ಸಚಿವರು, ಸಮಾವೇಶದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದೆ. ಈ ಪೈಕಿ ಶೇ.90 ಕ್ಕೂ ಹೆಚ್ಚು ಯೋಜನೆಗಳು ಬೆಂಗಳೂರಿನ ಆಚೆ ಅನುಷ್ಠಾನಗೊಳ್ಳುತ್ತಿದೆ. ಮೂರು ದಿನಗಳ ಸಮಾವೇಶದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದ್ದು, ಈ ಪೈಕಿ ಲಕ್ಷ ಕೋಟಿ ರೂ. ಮೊತ್ತದ 68 ಯೋಜನೆಗಳಿಗೆ ಈಗಾಗಲೇ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

5,41,369 ಕೋಟಿ ರೂ. ಮೊತ್ತದ 57 ಯೋಜನೆಗಳಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. 1,57,000 ಕೋಟಿ ರೂ. ಮೊತ್ತದ 2 ಯೋಜನೆಗಳನ್ನು ಸಮಾವೇಶದಲ್ಲಿ ಘೋಷಿಸಲಾಗಿದೆ. ವಿವಿಧ ಉದ್ಯಮಿಗಳು 2 ಲಕ್ಷ ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದ ಪ್ರಸ್ತಾವನೆಗಳೊಂದಿಗೆ ಬಂದಿದ್ದರು.

ಆದರೆ, ಈ ಯೋಜನೆಗಳಿಗೆ ಭೂಮಿ, ವಿದ್ಯುತ್, ಕಚ್ಚಾ ವಸ್ತುಗಳು, ಸಬ್ಸಿಡಿ ಸೇರಿದಂತೆ ವಿವಿಧ ವಿಷಯಗಳು ಇತ್ಯರ್ಥವಾಗಬೇಕಾಗಿರುವುದರಿಂದ ಒಪ್ಪಂದ ಮಾಡಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಈ ಉದ್ಯಮಿಗಳೊಂದಿಗೆ ನಮ್ಮ ಅಧಿಕಾರಿಗಳು ಚರ್ಚಿಸಿ, ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.

RELATED ARTICLES

Related Articles

TRENDING ARTICLES