Thursday, January 9, 2025

ಹಾಸನ: ಅಪಘಾತಕ್ಕೆ ಒಳಗಾದ ಶಾಲಾ ವಿದ್ಯಾರ್ಥಿಗಳಿದ್ದ ಬಸ್

ಹಾಸನ:ಶಾಲಾ ವಿದ್ಯಾರ್ಥಿಗಳಿದ್ದ ಬಸ್ ಅಪಘಾತವಾಗಿದೆ. ಚಾಲಕ, ನಿರ್ವಾಹಕ, ಶಾಲೆಯ ಪ್ರಾಂಶುಪಾಲರು, ಆರು ವಿದ್ಯಾರ್ಥಿಗಳು ಸೇರಿ ಹತ್ತು ಮಂದಿಗೆ ಗಂಭೀರ ಗಾಯವಾಗಿದೆ.

ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಬಳ್ಳೂರು-ಕೋನೆರಲು ಬಳಿ ಘಟನೆ ನಡೆದಿದ್ದು, ಹೊರನಾಡಿಗೆ ಮೈಸೂರಿನಿಂದ ಪ್ರವಾಸ ಹೊರಟಿದ್ದ ಮೈಸೂರು ಮಾಸನ ಗಂಗೋತ್ರಿ ಪ್ರೌಢಶಾಲಾ ವಿದ್ಯಾರ್ಥಿಗಳು. ವಿದ್ಯಾರ್ಥಿಗಳು ಸೇರಿ ಒಟ್ಟು 40 ಜನರಿದ್ದ ಬಸ್
ತಡರಾತ್ರಿ 2.45 ಸುಮಾರಿನಲ್ಲಿ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.

ಇನ್ನು ಗಾಯಾಳುಗಳಿಗೆ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಳಿದ ವಿದ್ಯಾರ್ಥಿಗಳಿಗೆ ಲಾಡ್ಜ್‌ನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಬೇಲೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.

RELATED ARTICLES

Related Articles

TRENDING ARTICLES