Wednesday, January 22, 2025

ಶಿವಮೊಗ್ಗ ಭೀಕರ ಅಪಘಾತ, ಒಂದೇ ಕುಟುಂಬದ ಮೂವರ ಸಾವು

ಶಿವಮೊಗ್ಗ: ಕಾರು, ಬೈಕ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ಮೂವರು ಸಾವಿಗೆ ಶರಣಾಗಿದ್ದಾರೆ. 4 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು. ಓರ್ವನಿಗೆ ಗಂಭೀರ ಗಾಯ.

ಶಿರಾಳಕೊಪ್ಪ ಸಮೀಪದ ಮಂಚಿನಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ. ಹಲುಗಿನಕೊಪ್ಪದ ಜ್ಯೋತಿ (30), ಗಂಗಮ್ಮ (50) ಮತ್ತು ಸೌಜನ್ಯ (4) ಮೃತರು.ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ಕಳೆದ ರಾತ್ರಿ ಸಂಭವಿಸಿರುವ ಘಟನೆ.

ಮಲ್ಲಿಕಾರ್ಜನ, ಮಗಳು ಸೌಜನ್ಯ, ತಾಯಿ ಜ್ಯೋತಿ, ಅವರ ತಾಯಿ ಗಂಗಮ್ಮ ಬೈಕಿನಲ್ಲಿ ತೆರಳುತ್ತಿದ್ದರು.ಶಿರಾಳಕೊಪ್ಪದಿಂದ ಹಲುಗಿನಕೊಪ್ಪದಲ್ಲಿರುವ ಮನೆಗೆ ತೆರಳುತ್ತಿದ್ದ ವೇಳೆ ಘಟನೆ.ಹಿರೆಕೆರೂರು ಕಡೆಯಿಂದ ಶಿರಾಳಕೊಪ್ಪ ಕಡೆಗೆ ತೆರಳುತ್ತಿದ್ದ ಕಾರು.
ಕಾರು, ಬೈಕು ಮುಖಾಮುಖಿ ಡಿಕ್ಕಿ.ಮಗು ಸೌಜನ್ಯ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಂಭಿರವಾಗಿ ಗಾಯಗೊಂಡಿದ್ದ ಮಲ್ಲಿಕಾರ್ಜುನ, ಜ್ಯೋತಿ, ಗಂಗಮ್ಮ.ಗಾಯಳುಗಳನ್ನು ಶಿಕಾರಿಪುರದ ಆಸ್ಪತ್ರೆಗೆ ರವಾನಿಸಲಾಗಿತ್ತು. ಇನ್ನು ಆಸ್ಪತ್ರೆಯಲ್ಲಿ ಗಂಗಮ್ಮ ನಿಧನರಾಗಿದ್ದಾರೆ.

ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುವ ವೇಳೆ ಅಸುನೀಗಿದ ಜ್ಯೋತಿ. ಮಲ್ಲಿಕಾರ್ಜುನ್ ಅವರ ಸ್ಥಿತಿ ಗಂಭೀರಬಾಗಿದೆ.
ಘಟನೆಯಲ್ಲಿ ನುಜ್ಜುಗುಜ್ಜಾದ ಬೈಕ್. ಕಾರಿನ ಮುಂಭಾಗ ಸಂಪೂರ್ಣ ಜಖಂ. ಶಿರಾಳಕೊಪ್ಪ ಠಾಣೆ ಪೊಲೀಸರಿಂದ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES