ಬೆಂಗಳೂರು : ನಗರ ಭೂ ಸಾರಿಗೆ ನಿರ್ದೇಶನಾಲಯ ಮತ್ತು ಬೆಂಗಳೂರು ಮೆಟ್ರೊ ರೈಲು ನಿಗಮ ಅತ್ಯುತ್ತಮ ನಗರ ಸಾರಿಗೆ ಶ್ರೇಷ್ಠತೆಯ ಪ್ರಶಸ್ತಿಗೆ ಭಾಜನವಾಗಿವೆ.
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯು ರೈಲು ಮತ್ತು ಮೆಟ್ರೊ ಸಿಸ್ಟಮ್ಸ್ ಸ್ವದೇಶಿ ಆವಿಷ್ಕಾರದಲ್ಲಿ ಶ್ರೇಷ್ಠತೆಗಾಗಿ ಪ್ರಶಸ್ತಿ ಪಡೆದುಕೊಂಡಿದೆ. ಇನ್ನು ಹುಬ್ಬಳ್ಳಿ-ಧಾರವಾಡ ಬಸ್ ರ್ಯಾಪಿಡ್ ಟ್ರಾನ್ಸಿಟ್ ಸಿಸ್ಟಮ್ಸ್ ಲಿಮಿಟೆಡ್, ಟ್ರಾನ್ಸಿಟ್ ಮತ್ತು ಮೊಬಿಲಿಟಿ ವಿಭಾಗದಲ್ಲಿ ಹೆಚ್ಚು ಆದ್ಯತೆಯ ಸಾರಿಗೆ ವ್ಯವಸ್ಥೆ ಪ್ರಶಸ್ತಿಯನ್ನು ಪಡೆದುಕೊಂಡಿದೆ. ನಗರ ಮೂಲಸೌಕರ್ಯ (ಡಲ್ಟ್) ವಿಭಾಗ ದಡಿಯಲ್ಲಿ ನಗರಾಭಿವೃದ್ಧಿಗಾಗಿ ಅತ್ಯಂತ ಮೆಚ್ಚುಗೆ ಪಡೆದ ನಗರ ಯೋಜನಾ ಸಂಸ್ಥೆಯ ಪ್ರಶಸ್ತಿಯನ್ನು ಸಹ ಪಡೆದುಕೊಂಡಿದೆ
ಕೊಚ್ಚಿಯಲ್ಲಿ ನಡೆದ ಅರ್ಬನ್ ಮೊಬಿಲಿಟಿ ಇಂಡಿಯಾ ಕಾನ್ಫರೆನ್ಸ್‌ನಲ್ಲಿ ಬಿಎಂಆರ್‌ಸಿಎಲ್‌ಗೆ ಪ್ರಶಸ್ತಿ ನೀಡಲಾಗಿದೆ. ಮೆಟ್ರೊ ರೈಲು ವರ್ಗದ ಅಡಿಯಲ್ಲಿ ಪ್ರಯಾಣಿಕರಿಗೆ ಉತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಬಿಎಂಆರ್‌ಸಿಎಲ್‌ಗೆ ಪ್ರಶಸ್ತಿಯನ್ನು ನೀಡಲಾಗಿದೆ. ಜೊತೆಗೆ ಕೈಗಾರಿಕಾ ವಿಭಾಗದಡಿಯಲ್ಲಿ ನವೀನ ಅರ್ಬನ್ ಮೊಬಿಲಿಟಿ ಲೀಡರ್ ಪ್ರಶಸ್ತಿಯನ್ನು ನಗರ ಭೂ ಸಾರಿಗೆ ನಿರ್ದೇಶನಾಲಯದ ಆಯುಕ್ತರಾದ ವಿ. ಮಂಜುಳಾ ಅವರು ಪಡೆದಿದ್ದಾರೆ.